Site icon PowerTV

ಯತ್ನಾಳ್ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಪ್ರತಿಭಟನೆ ನಡೆಸುವ ವೇಳೆ ಅಸ್ವಸ್ಥಗೊಂಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಅವರ ಆರೋಗ್ಯ ವಿಚಾರಿಸಿದರು.

ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ಅಸ್ವಸ್ಥಗೊಂಡಿದ್ದ ಶಾಸಕ ಯತ್ನಾಳ್ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ವೇಳೆ ಆಸ್ಪತ್ರೆಗೆ ಸಿದ್ದರಾಮಯ್ಯ ಹಾಗೂ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ ಖಾದರ್ ಅವರು ಭೇಟಿಮಾಡಿ, ಆರೋಗ್ಯ ವಿಚಾರಿಸಿದರು. ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಈ  ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಭಾಧ್ಯಕ್ಷ ಯು.ಟಿ ಖಾದರ್, ಶಾಸಕ ಯತ್ನಾಳ್ ಆರೋಗ್ಯ ಚೆನ್ನಾಗಿದೆ ಎಂದರು. ನಾಳೆ ರಾಜ್ಯಪಾಲರಾಗಿ ಬಿಜೆಪಿಯವರು ದೂರು ಕೊಡ್ತಾರೆ ಅಂತ ಪ್ರಶ್ನೆ ಮಾಡಿದ್ದಕ್ಕೆ ಅಲ್ಲಿ ವಿಚಾರ ಅಲ್ಲಿಗೆ, ಇಲ್ಲಿ ವಿಚಾರ ಇಲ್ಲಿಗೆ ಅಂತ ಹೇಳಿ ಹೊರಟು ಹೋದರು.

ಯತ್ನಾಳ್​ ಆರೋಗ್ಯ ಸ್ಥಿರ

ಶಾಸಕ ಯತ್ನಾಳ್​ ಅವರು ಆರೋಗ್ಯವಾಗಿದ್ದಾರೆ ಎಂದು ಮಾಜಿ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಹೇಳಿದರು. ಈಗಷ್ಟೆ ಅವರನ್ನ ಮಾತಾಡಿಸಿಕೊಂಡು ಬಂದಿದ್ದೇವೆ. ಇವತ್ತು ನಡೆಯಬಾರದ ಘಟನೆ ನಡೆದುಹೋಗಿದೆ. ಆ ನೂಕಾಟ ತಳ್ಳಾಟದಲ್ಲಿ ಅವರ ಬಿಪಿ ಜಾಸ್ತಿ ಆಗಿ ಆರೋಗ್ಯದಲ್ಲಿ ಏರುಪೇರಾಗಿದೆ. ಈಗ ಸ್ಥಿರವಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಬೇಗ ಗುಣಮುಖರಾಗಲಿ

ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆದಷ್ಟು ಬೇಗ ಚೇತರಿಸಿಕೊಂಡು ಸಂಪೂರ್ಣ ಗುಣಮುಖರಾಗಲೆಂದು ಹಾರೈಸುತ್ತೇನೆ ಎಂದು ಶಿಕಾರಿಪುರ ಬಿಜೆಪಿ ಶಾಸಕ ಬಿ.ವೈ ವಿಜಯೇಂದ್ರ ಅವರು ಟ್ವೀಟ್ ಮಾಡಿದ್ದಾರೆ.

Exit mobile version