Monday, August 25, 2025
Google search engine
HomeUncategorizedನಾಳೆಯಿಂದ ಆ.11ರವರೆಗೆ ಮುಂಗಾರು ಅಧಿವೇಶನ, ಮೋದಿಗೆ ಸಂಕಷ್ಟ ತಂದೊಡ್ಡುತ್ತಾ ಸದನ?

ನಾಳೆಯಿಂದ ಆ.11ರವರೆಗೆ ಮುಂಗಾರು ಅಧಿವೇಶನ, ಮೋದಿಗೆ ಸಂಕಷ್ಟ ತಂದೊಡ್ಡುತ್ತಾ ಸದನ?

ನವದೆಹಲಿ : ನಾಳೆಯಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದೆ. ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜಾಗಿವೆ.

ಮುಂಬರುವ ಲೋಕಸಭಾ ಚುನಾವಣೆಯ ಬೆನ್ನಲ್ಲೆ ಈ ಬಾರಿಯ ಸಂಸತ್ ಅಧಿವೇಶನದಲ್ಲಿ ಗದ್ದಲ-ಕೋಲಾಹಲ ಉಂಟಾಗುವ ನಿರೀಕ್ಷೆ ಇದೆ. ನಾಳೆಯಿಂದ ಆಗಸ್ಟ್ 11ರವರೆಗೆ ಸಂಸತ್‌ನ ಹೊಸ ಕಟ್ಟಡದಲ್ಲಿ ಕಲಾಪಗಳು ಆರಂಭವಾಗಲಿದ್ದು, ಹೊಸ ಮೈಲಿಗಲ್ಲು ಸ್ಥಾಪಿಸಲಾಗಿದೆ.

ಪ್ರಮುಖವಾಗಿ ಮಣಿಪುರ ಹಿಂಸಾಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇದುವರೆಗೂ ಮೌನ ಮುರಿದಿಲ್ಲ. ಮಣಿಪುರದಲ್ಲಿ ಸಂಭವಿಸಿದ ವ್ಯಾಪಕ ಹಿಂಸಾಚಾರದಲ್ಲಿ ಹಲವರು ಸಾವನ್ನಪ್ಪಿದ್ದು, ಸಾರ್ವಜನಿಕ ಆಸ್ತಿ-ಪಾಸ್ತಿಗಳು ಹಾನಿಯಾಗಿವೆ. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಲು ಸಜ್ಜಾಗಿವೆ.

ಇದರ ಜತೆಗೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಸರ್ಕಾರಿ ಸಂಸ್ಥೆಗಳ ದುರ್ಬಳಕೆ ಸೇರಿದಂತೆ ಇನ್ನಿತರ ವಿಷಯಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ಸಿಲುಕಿಸಲು ಸಜ್ಜಾಗಿವೆ. ಮತ್ತೊಂದೆಡೆ ಆಡಳಿತ ಪಕ್ಷದ ನಾಯಕರು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದು, ವಿಪಕ್ಷಗಳಿಗೆ ತಿರುಗೇಟು ನೀಡಲು ತಂತ್ರ ರೂಪಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments