Site icon PowerTV

ಡಿಸಿಎಂ ಸ್ವಕ್ಷೇತ್ರದಲ್ಲಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ

ಕನಕಪುರ : ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​ ಸ್ವಕ್ಷೇತ್ರ ಕನಕಪುರದಲ್ಲಿ ಆಡಳಿತ ಯಂತ್ರಕ್ಕೆ ಚುರುಕಿಲ್ಲ ಎಂಬ ಆರೋಪ ಕೇಳಿಬಂದಿದೆ. ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಕನಕಪುರ ಅಯ್ಯಪ್ಪಸ್ವಾಮಿ ದೇವಸ್ಥಾನದಿಂದ ತಾಲ್ಲೂಕು ಕಚೇರಿವರೆಗೂ ಕನ್ನಡಪರ ಸಂಘಟನೆ, ರೈತ ಸಂಘಟನೆ, ದಲಿತ ಸಂಘಟನೆಗಳು ಮೆರವಣಿಗೆ ಮಾಡಿವೆ.

ರೇಷ್ಮೆ ದರ ಕುಸಿತ, ಹಾಲಿನ ದರಕ್ಕೆ ಪ್ರೋತ್ಸಾಹ ಧನ ಕಡಿಮೆ, ತಾಲ್ಲೂಕು ಕಚೇರಿಯಲ್ಲಿ ಜನರ ಕೆಲಸಗಳು ಆಗ್ತಿಲ್ಲ ಎಂದು ಪ್ರತಿಭಟನೆ ಮಾಡಿದ್ದಾರೆ. 15ಕ್ಕೂ ಹೆಚ್ಚು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಇಂದು ಗೃಹಲಕ್ಷ್ಮೀ ಯೋಜನೆಗೆ ಅಧಿಕೃತ ಚಾಲನೆ

ತಾಲ್ಲೂಕು ಕಚೇರಿಗೆ ಮುತ್ತಿಗೆ

ಇದೇ ವೇಳೆ ಪ್ರತಿಭಟನಾಕಾರರು ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ, ತಾಲ್ಲೂಕು ಕಚೇರಿಗೆ ಬೀಗ ಜಡಿಯಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದಿದೆ.

ಹೋರಾಟ ಕುಮಾರಸ್ವಾಮಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇಟ್ಟು ದಿನವಾದರೂ ಕನಕಪುರದಲ್ಲಿ ಆಡಳಿತ ಯಂತ್ರ ಚುರುಕಾಗಿಲ್ಲ. ತಾಲ್ಲೂಕು ಕಚೇರಿಗಳಲ್ಲಿ ಜನರು, ರೈತರು ತಮ್ಮ ಕೆಲಸಕ್ಕಾಗಿ ದಿನವಿಡೀ ಕಾದು ಕುಳಿಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

Exit mobile version