Site icon PowerTV

ತೀಸ್ತಾ ಸೆಟಲ್ವಾಡ್ ಗೆ ಸುಪ್ರೀಂಕೋರ್ಟ್ ಜಾಮೀನು

ಬೆಂಗಳೂರು : ಸಾಮಾಜಿಕ ಹೋರಾಟರಾರ್ತಿ ತೀಸ್ತಾ ಸೆಟಲ್ವಾಡ್‌(Teesta Setalvad)ಗೆ ಸರ್ವೋಚ್ಛ ನ್ಯಾಯಾಲಯ(Supreme Court) ಜಾಮೀನು (Bail) ಮಂಜೂರು ಮಾಡಿದೆ.

2002ರ ಗುಜರಾತ್ ಗಲಭೆ ಪ್ರಕರಣಗಳಲ್ಲಿ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಬೇಲ್ ನೀಡಿದೆ.

ಜಾಮೀನು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಜಾಮೀನು ಅವಧಿಯಲ್ಲಿ ಸೆಟಲ್ವಾಡ್ ಅವರ ಪಾಸ್‌ಪೋರ್ಟ್ ವಿಚಾರಣೆ ನ್ಯಾಯಾಲಯದಲ್ಲಿ ಇರಿಸುವಂತೆ ನ್ಯಾಯಾಲಯ ಸೂಚಿಸಿದೆ.

ಇದನ್ನೂ ಓದಿ : ಕೌಟುಂಬಿಕ ಕಲಹ ಹಿನ್ನಲೆ ಪತ್ನಿಯನ್ನೇ ಕೊಂದ ಪತಿ

ಸಾಕ್ಷಿಗಳಿಂದ ದೂರ ಉಳಿಯಬೇಕು

ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಯಾವುದೇ ಪ್ರಯತ್ನವನ್ನು ಮಾಡುವುದಿಲ್ಲ ಮತ್ತು ಗುಜರಾತ್‌ನಲ್ಲಿರುವ ಸಾಕ್ಷಿಗಳಿಂದ ದೂರ ಉಳಿಯಬೇಕು ಎಂಬ ಷರತ್ತು ವಿಧಿಸಿ ಜಾಮೀನು ನೀಡಲಾಗಿದೆ. ಒಂದು ವೇಳೆ ಆಕೆ ಈ ಷರತ್ತನ್ನು ಉಲ್ಲಂಘಿಸಿರುವುದು ಕಂಡುಬಂದರೆ, ಗುಜರಾತ್ ಪೊಲೀಸರು ಆಕ್ಷೇಪಣಾ ಅರ್ಜಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ.

Exit mobile version