Site icon PowerTV

60 ವರ್ಷ ದೇಶವನ್ನು ಲೂಟಿ ಮಾಡಿದವ್ರು ಒಂದಾಗಿದ್ದಾರೆ : ಶೋಭಾ ಕರಂದ್ಲಾಜೆ

ಉಡುಪಿ: ವಿರೋಧ ಪಕ್ಷದವರ ಮೈತ್ರಿ ಒಕ್ಕೂಟದ ಸಭೆ ವಿಚಾರವಾಗಿ ಕಿಡಿಕಾರಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೇಶವನ್ನು 60 ವರ್ಷ ಲೂಟಿ ಮಾಡಿದವರು ಇದೀಗ ಒಂದಾಗಿದ್ದಾರೆ ಎಂದು ಕಿಡಿಕಾರಿದ್ದಾರೆ. 

ಸುದ್ದಿಗಾರರೊಂದಿಗೆ ಉಡುಪಿಯಲ್ಲಿ ಮಾತನಾಡಿದ ಅವರು, ವಿಪಕ್ಷಗಳು ಒಂದಾಗಿ ಈಸ್ಟ್ ಇಂಡಿಯಾ ಕಂಪನಿ ಮಾಡಿದ್ದಾರೆ. ಅವರಿಗೆ ಪ್ರಧಾನಿಗಳೇ ಟಾರ್ಗೆಟ್​ ಎಂದು ಗುಡುಗಿದ್ದಾರೆ.

 ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ : ಆರ್​.ಅಶೋಕ್

ಕಳೆದ ಬಾರಿಯಂತೆ ಮತ್ತೆ ಬಿರುಸಿನ ಪ್ರಚಾರ ಶುರು ಮಾಡಿದ್ದಾರೆ. ತಮ್ಮ ಒಕ್ಕೂಟಕ್ಕೆ ಇಂಡಿಯಾ ಎಂಬ ಹೆಸರು ಇಟ್ಟುಕೊಂಡಿದ್ದಾರೆ. ಇದು ಭಾರತ ವರ್ಸಸ್ ಈಸ್ಟ್ ಇಂಡಿಯಾ ಕಂಪನಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

 

Exit mobile version