Tuesday, August 26, 2025
Google search engine
HomeUncategorizedಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕೊಲೆಗೈದ ಪುತ್ರಿ

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕೊಲೆಗೈದ ಪುತ್ರಿ

ರಾಮನಗರ : ಕ್ಷುಲ್ಲಕ ಕಾರಣಕ್ಕೆ ಪುತ್ರಿಯೇ ತನ್ನ ತಂದೆಯನ್ನು ಗುದ್ದಲಿಯಿಂದ ಹೊಡೆದು ಕೊಲೆಗೈದ ಘಟನೆ ಎರಡು ದಿನಗಳ ಬಳಿಕ ತಡವಾಗಿ ಬೆಳಕಿಗೆ ಬಂದಿದೆ.

ಚನ್ನಪಟ್ಟಣ ತಾಲೂಕಿನ ನಾಯಿದೊಳೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹುಚ್ಚೀರಯ್ಯ (68) ಮಗಳಿಂದಲೇ ಕೊಲೆಯಾದ ತಂದೆ. ಪುಷ್ಪ (30) ತಂದೆಯನ್ನೇ ಹತ್ಯೆ ಮಾಡಿದ ಮಗಳು.

ಆರೋಪಿ ಪುಷ್ಪ ಗಂಡನ ಬಿಟ್ಟು ಬಂದು ಹಲವು ವರ್ಷಗಳಿಂದ ತಂದೆ ಮನೆಯಲ್ಲೇ ವಾಸವಿದ್ದಳು. ಕೆಲ ದಿನಗಳಿಂದ ಮಾನಸಿಕ ಅಸ್ವಸ್ಥತೆಗೆ ಒಳಗಾಗಿದ್ದಳು. ಮಂಗಳವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಅಪ್ಪ ಹಾಗೂ ಮಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಜಗಳ ತಂದೆಯ ಕೊಲೆಯಲ್ಲಿ ಅಂತ್ಯವಾಗಿದೆ.

ಇದನ್ನೂ ಓದಿ : ಕುಡಿದ ಮತ್ತಿನಲ್ಲಿ ಮಾವನನ್ನೇ ಕೊಂದ ಅಳಿಯ

ರಕ್ತಸ್ರಾವದಿಂದ ಸ್ಥಳದಲ್ಲೇ ಸಾವು

ಕೋಪದ ಕೈಗೆ ಬುದ್ದಿ ಕೊಟ್ಟ ಮಗಳು ಪುಷ್ಪ, ಕೋಪದಿಂದ ಗುದ್ದಲಿಯಿಂದ ತಂದೆಯ ತಲೆಗೆ ಬಲವಾಗಿ ಹೊಡೆದಿದ್ದಾಳೆ. ತೀವ್ರ ರಕ್ತಸ್ರಾವದಿಂದ ತಂದೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಳಿಕ, ಯಾರಿಗೂ ಮಾಹಿತಿ ತಿಳಿಸದೆ ಮಗಳು ಪುಷ್ಪ ಸ್ಥಳದಿಂದ ಪರಾರಿಯಾಗಿದ್ದಾಳೆ. ಮಾಹಿತಿ ತಿಳಿದ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಚನ್ನಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಮಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments