Site icon PowerTV

ನನ್ನನ್ನು ಪಾಕಿಸ್ತಾನಕ್ಕೆ ಕಳುಹಿಸಬೇಡಿ : ಮೋದಿಗೆ ಸೀಮಾ ಮನವಿ

ಬೆಂಗಳೂರು : ಪಬ್‌ಜೀ ಪ್ರೇಮಿಗಾಗಿ ತನ್ನ 4 ಮಕ್ಕಳೊಂದಿಗೆ ಭಾರತಕ್ಕೆ ಅಕ್ರಮ ಪ್ರವೇಶ ಮಾಡಿದ್ದ ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್‌ ಪ್ರಧಾನಿ ನರೇಂದ್ರ ಮೋದಿಗೆ ಮನವಿಯೊಂದನ್ನು ಮಾಡಿದ್ದಾಳೆ.

ನಾನು ಗೂಢಚಾರಿಯಲ್ಲ, ನನ್ನನ್ನು ಪಾಕಿಸ್ತಾನಕ್ಕೆ ವಾಪಸ್‌ ಕಳುಹಿಸಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್​ಗೆ ಮನವಿ ಮಾಡಿಕೊಂಡಿದ್ದಾಳೆ.

ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸೀಮಾ, ನಾನು ಭಾರತಕ್ಕೆ ಹೋಗುತ್ತಿದ್ದೇನೆ ಅನ್ನೋದು ಪಾಕಿಸ್ತಾನದಲ್ಲಿ ಯಾರಿಗಾದರೂ ತಿಳಿದಿದ್ದರೆ ಅಲ್ಲಿಯೇ ನನ್ನನ್ನ ಕೊಂದುಬಿಡುತ್ತಿದ್ದರು. ನಾನು ಗೂಢಚಾರಿಯಲ್ಲ. ಶೀಘ್ರವೇ ಸತ್ಯವೇನೆಂಬುದು ಹೊರಬರಲಿದೆ. ನನ್ನನ್ನು ವಾಪಸ್‌ ಕಳುಹಿಸದಂತೆ ನಾನು ಮೋದಿ ಜೀ, ಯೋಗಿ ಜೀ ಅವರಲ್ಲಿ ವಿನಂತಿಸುತ್ತೇನೆ ಎಂದು ಹೇಳಿದ್ದಾಳೆ.

ಪಬ್ಜಿ ಮೂಲಕ ಪರಿಚಯ

ಇನ್ನೂ, ಭಾರತದ ನಿವಾಸಿ ಸಚಿನ್ ಗೆ 30 ವರ್ಷದ ಸೀಮಾ ಪಬ್ಜಿ ಮೂಲಕ ಪರಿಚಯವಾಗಿದ್ದರು. ಪರಿಚಯ ಪ್ರೀತಿಗೆ ತಿರುಗಿ, ಸಚಿನ್ ಜೊತೆಗೆ ಜೀವಿಸುವ ಸಲುಲು ಸೀಮಾ ತನ್ನ 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದರು. ಕಳೆದ 2 ತಿಂಗಳಿನಿಂದ ಸೀಮಾ ಸಚಿನ್ ಮೀನ ಜೊತೆಗೆ ಉತ್ತರ ಪ್ರದೇಶದ ಗೌತಮ ಬುದ್ಧ ನಗರ ಜಿಲ್ಲೆಯ ಗ್ರೇಟರ್ ನೋಯ್ಡಾದ ರಬುಪುರ ಪ್ರದೇಶದಲ್ಲಿ ವಾಸಿಸುತ್ತಿದ್ದರು.

Exit mobile version