Site icon PowerTV

ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಇಂದು ಬಿಜೆಪಿ ಪಕ್ಷದಿಂದ ಪ್ರತಿಭಟನೆ!

ಬೆಂಗಳೂರು: ರಾಜ್ಯದ ಕಾಂಗ್ರೆಸ್‌ ಸರ್ಕಾರದ ಜನವಿರೋಧಿ ನೀತಿಯೂ ಸೇರಿದಂತೆ ವೈಫಲ್ಯಗಳನ್ನು ಖಂಡಿಸಿ ಇಂದು ಬೆಂಗಳೂರು ಸೇರಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: ಗೃಹಜ್ಯೋತಿ : ಉಚಿತ ವಿದ್ಯುತ್​ ಸೌಲಭ್ಯಕ್ಕೆ ಅರ್ಜಿಸಲ್ಲಿಸಲು ಡೆಡ್​ ಲೈನ್​ ಫಿಕ್ಸ್ ಮಾಡಿದ ಇಂಧನ ಇಲಾಖೆ…

ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್‌ ಸದಸ್ಯ ಎನ್. ರವಿಕುಮಾರ್ ಈ ವಿಷಯ ತಿಳಿಸಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿನ ವೈಫಲ್ಯವನ್ನು ಖಂಡಿಸಿ ಪ್ರತಿಭಟನೆ ನಡೆಯಲಿದೆ. ಸಭಾಧ್ಯಕ್ಷರು ವಿಧಾನಮಂಡಲದ ಕಲಾಪವನ್ನು ಸರ್ವಾಧಿಕಾರಿಯಂತೆ ನಡೆಸಿದ್ದಾರೆ. ಅಲ್ಲದೆ ಪ್ರತಿಪಕ್ಷವನ್ನು ಹತ್ತಿಕ್ಕಲಾ ಗಿದೆ. ವಿಧಾನಮಂಡಲದಲ್ಲಿ ಸಭಾಧ್ಯಕ್ಷರು ಬಿಜೆಪಿಯ 10 ಶಾಸಕರನ್ನು ಅಮಾನತು ಮಾಡಿದ್ದನ್ನು ವಿರೋಧಿಸಿ ಈ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯ ಸರ್ಕಾರದ ಬಜೆಟ್‌ ಅಲ್ಪಸಂಖ್ಯಾತರ ಪರ ಮಾತ್ರವಲ್ಲ ಹಿಂದೂಗಳ ವಿರೋಧಿ, ರೈತ ವಿರೋಧಿ, ನೀರಾವರಿ ವಿರೋಧಿ ಮತ್ತು ಶಿಕ್ಷಣ ವಿರೋಧಿಯಾಗಿದೆ. ಕೇಂದ್ರ ಸರ್ಕಾರವನ್ನು ತೆಗಳುವ ಬಜೆಟ್ ಇದಾಗಿದೆ. ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಭಯೋತ್ಪಾದನಾ ಚಟುವಟಿಕೆಗಳು ಅಂತಾರಾ ಷ್ಟ್ರೀಯ ವ್ಯಾಪ್ತಿಯನ್ನು ಹೊಂದಿರುವ ಸಾಧ್ಯತೆ ಇದ್ದು, ಈ ಪ್ರಕರಣವನ್ನು ತನಿಖೆಗಾಗಿ ಎನ್‌ಐಎಗೆ ಹಸ್ತಾಂತರ ಮಾಡುವಂತೆ ಅವರು ಆಗ್ರಹಿಸಿದ್ದಾರೆ.

Exit mobile version