ಮಂಡ್ಯ : ಸಿಎಂ ಮಾಡೋದು ಗೊತ್ತು, ಇಳಿಸೋದು ಗೊತ್ತು ಎಂಬ ಬಿ.ಕೆ ಹರಿಪ್ರಸಾದ್ ಹೇಳಿಕೆ ಬಗ್ಗೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಿಎಂ ಸದೃಢವಾಗಿದ್ದಾರೆ, ಸರ್ಕಾರವು ಸದೃಢವಾಗಿದೆ. ಸಿಎಂ ಬಗ್ಗೆ ಯಾವುದೇ ಅಪಸ್ವರ ಇಲ್ಲ ಎಂದು ಹೇಳಿದ್ದಾರೆ.
ಬಿ.ಕೆ ಹರಿಪ್ರಸಾದ್ ಅವರು ಯಾವ ಕಾರಣಕ್ಕೆ ಹಾಗೆ ಹೇಳಿದ್ದಾರೋ ನಾನು ನೋಡಿಲ್ಲ. ಇದು ಅನವಶ್ಯಕವಾಗಿದ್ದು, ಬಹುಶಃ ಆಗೆ ಹೇಳಿರೋಕೆ ಸಾಧ್ಯವಿಲ್ಲ. ನಮ್ಮ ಪಾರ್ಟಿಯಲ್ಲಿ ಆ ಥರಹದ ಆಲೋಚನೆ ಇಲ್ಲ. ಐದು ಗ್ಯಾರಂಟಿ ಕೊಟ್ಟಿರುವುದೇ ನಮ್ಮ ಪಕ್ಷಕ್ಕೆ, ಸರ್ಕಾರಕ್ಕೆ ಹೆಗ್ಗಳಿಕೆ. ಪಕ್ಷದಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ ಎಂದು ಚಲುವರಾಯಸ್ವಾಮಿ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದರು.
ಇದನ್ನೂ ಓದಿ : ದಲಿತ ಶಾಸಕರು, ಮಂತ್ರಿಗಳೇ ನಿಮಗೆ ನರ ಇಲ್ವಾ? : ಬೊಮ್ಮಾಯಿ ಕಿಡಿ
ಜೆಡಿಎಸ್ ಅನ್ನು ಜನರು ನಂಬಲಿಲ್ಲ
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ವಿಚಾರವಾಗಿ ಮಾತನಾಡಿ, ಬಿಜೆಪಿಯವರಿಗೆ ಇನ್ನೇನು ಕೆಲಸವಿಲ್ಲ. ಬಿಜೆಪಿ, ಜೆಡಿಎಸ್ ಅನ್ನು ಜನರು ನಂಬಲಿಲ್ಲ. ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಆಗಲಿಲ್ಲ. ಅವರ ಪರಿಸ್ಥಿತಿ ಏನು ಅಂತಾ ತಿಳಿದುಕೊಳ್ಳಬೇಕು ಎಂದು ವಾಗ್ದಾಳಿ ನಡೆಸಿದರು.
ಜೆಡಿಎಸ್ ಹಾಗೂ ಬಿಜೆಪಿ ಹೊಂದಾಣಿಕೆ ವಿಚಾರ ಕುರಿತು ಮಾತನಾಡಿ, ಬಿಜೆಪಿಗೆ ಜೆಡಿಎಸ್ ಅನಿವಾರ್ಯ, ಜೆಡಿಎಸ್ ಗೆ ಬಿಜೆಪಿ ಅನಿವಾರ್ಯ. ಈ ಬಗ್ಗೆ ನಾವೇನು ಹೇಳುವ ಅಗತ್ಯವಿಲ್ಲ ಎಂದು ಕುಟುಕಿದರು.



Pinco oyunlarında hər kəs öz oyununu tapar. Slot dünyasına başla pinco slot. Pinco-da qeydiyyat pulsuzdur.
Pinco oyunçular üçün yardım mövcuddur.