Site icon PowerTV

ಗೃಹಲಕ್ಷ್ಮೀ ನೋಂದಣಿ ಕೇಂದ್ರಕ್ಕೆ ದಿಢೀರ್ ಭೇಟಿ ಕೊಟ್ಟ ಡಿಸಿಎಂ ಡಿಕೆಶಿ

ರಾಮನಗರ: ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾದ ಹಿನ್ನೆಲೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕನಕಪುರದ ನಾಗರಿಕಾ ಸೇವಾ ಕೇಂದ್ರಕ್ಕೆ ದಿಢೀರ್ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ಮಣಿಪುರದಂತೆ ಮಹಿಳೆಯರನ್ನು ಅರೆಬೆತ್ತಲೆಗೊಳಿಸಿ ಭೀಕರ ಹಲ್ಲೆ!

ತಾಲ್ಲೂಕಿನ ಎಲ್.ಎನ್​ ರಸ್ತೆಯಲ್ಲಿರುವ ಕರ್ನಾಟಕ ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಸೇವಾ ಕೇಂದ್ರದಲ್ಲಿ ಗೃಹಲಕ್ಷ್ಮಿ ನೋಂದಣಿ ಪ್ರಕ್ರಿಯೆಯನ್ನು ಹೇಗೆ ಮಾಡಲಾಗುತ್ತಿದೆ? ಅಲ್ಲಿನ ಸಿಬ್ಬಂದಿ ಏನಾದರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರಾ? ಅಥವಾ, ಬೇಕಂತಲೇ ವಿಳಂಬ ಮಾಡುತ್ತಿದ್ದಾರಾ? ಮನೆ ಯಜಮಾನಿಯರಿಗೆ ಯೋಜನೆ ಬಗ್ಗೆ ಸರಿಯಾಗಿ ಮಾಹಿತಿ ಇದೆಯಾ? ಎಂಬುದರ ಬಗ್ಗೆ ಸಿಬ್ಬಂದಿಯ ಜೊತೆ ಕಂಪ್ಯೂಟರ್ ಮುಂದೆ ಕೂತು ಖುದ್ದು ಪರಿಶೀಲಿಸಿನೆ ನಡೆಸಿದರು.

ನಾಗರೀಕ ಸೇವಾ ಕೇಂದ್ರಕ್ಕೆ ದಿಢೀರ್​ ಭೇಟಿ ಕೊಟ್ಟ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​ ರನ್ನು ಕಂಡ ಇಲ್ಲಿನ ಸಿಬ್ಬಂದಿಗಳು ಹಾಗೂ ಗೃಹಲಕ್ಷ್ಮೀ ಯೋಜನೆಗೆ ನೋಂದಾಯಿಸಿಕೊಳ್ಳಲು ಬಂದಿದ್ದ ಮಹಿಳೆಯರು ಅಚ್ಚರಿಗೊಳಗಾದರು. ಈ ವೇಳೆ ಮಹಿಳೆಯೊಬ್ಬರು ಗೃಹಲಕ್ಷ್ಮಿ ಗೆ ಅಗತ್ಯ ದಾಖಲೆ ಸಲ್ಲಿಸಲು ತನಗಿರುವ ವೈಯಕ್ತಿಕ ತಾಂತ್ರಿಕ ಸಮಸ್ಯೆ ಬಗ್ಗೆ ಹೇಳಿಕೊಂಡರು ಇದಕ್ಕೆ ಪ್ರತಿಕ್ರಿಯಿಸಿದ ಅವರು ಸ್ಥಳದಲ್ಲಿಯೇ ಪರಿಹಾರವನ್ನು ಸೂಚಿಸಿದರು.

ಇದೇ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಗೆ ನೊಂದಾಯಿಸಿಕೊಂಡ ಮಹಿಳೆಯರಿಗೆ ನೋಂದಣಿ ಪತ್ರವನ್ನು ಕೂಡ ವಿತರಣೆ ಮಾಡಿದರು.

Exit mobile version