Site icon PowerTV

ಮಣಿಪುರದಂತೆ ಮಹಿಳೆಯರನ್ನು ಅರೆಬೆತ್ತಲೆಗೊಳಿಸಿ ಭೀಕರ ಹಲ್ಲೆ!

ಪಶ್ಚಿಮ ಬಂಗಾಳ: ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ವಿವಸ್ತ್ರಗೊಳಿಸಿ ಸಾರ್ವಜನಿಕ ಮೆರವಣಿಗೆ ಮಾಡಿದ ಘಟನೆ ಬೆನ್ನಲ್ಲೇ ಇಂತಹುದೇ ಮತ್ತೊಂದು ಘಟನೆ ಪಶ್ಚಿಮ ಬಂಗಾಳದಲ್ಲಿ ವರದಿಯಾಗಿದೆ.

ಇದನ್ನೂ ಓದಿ: ಹಾಲಿನ ದರ ಏರಿಕೆ : ಸರ್ಕಾರದ ವಿರುದ್ದ ಹೆಚ್​ಡಿ ಕುಮಾರಸ್ವಾಮಿ ಆಕ್ರೋಶ

ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಇಬ್ಬರು ಮಹಿಳೆಯರನ್ನು ಥಳಿಸಿ ಅರೆಬೆತ್ತಲೆಯಾಗಿ ಮೆರವಣಿಗೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕಳೆದೆರಡು ದಿನಗಳ ಹಿಂದೆ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು. ಮಾಲ್ಡಾದ ಪಕುವಾಹತ್‌ನಲ್ಲಿ ಸ್ಥಳೀಯರು ಇಬ್ಬರು ಮಹಿಳೆಯರನ್ನು ಕಳ್ಳಿಯರೆಂದು ಶಂಕಿಸಿ ಹಿಡಿದು ಥಳಿಸಿದ್ದಾರೆ. ಈ ಕುರಿತು ಪಶ್ಚಿಮ ಬಂಗಾಳ ಪೊಲೀಸರಿಗೆ ಯಾವುದೇ ದೂರು ದಾಖಲಾಗಿಲ್ಲ.

ಘಟನೆಯ ವಿಡಿಯೋವನ್ನು ಬಿಜೆಪಿಯ ಸಾಮಾಜಿಕ ಜಾಲತಾಣ ವಿಭಾಗದ ರಾಷ್ಟ್ರೀಯ ಮುಖ್ಯಸ್ಥ ಅಮಿತ್ ಮಾಳವಿಯ ಅವರು, ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Exit mobile version