Site icon PowerTV

ನೇಕಾರರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮನ್ನು ಭೇಟಿ ಮಾಡಿದ ನೇಕಾರ ಸಮುದಾಯದ ನಿಯೋಗಕ್ಕೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

20 ಹೆಚ್.ಪಿ(20HP) ವಿದ್ಯುತ್ ಚಾಲಿತ ಮಗ್ಗಗಳಿಗೆ ಪ್ರತೀ ಯುನಿಟ್ ವಿದ್ಯುತ್ ಬಳಕೆಗೆ 1.25 ರೂ. ವಿಧಿಸುತ್ತಿದ್ದ ವಿಶೇಷ ಯೋಜನೆಯನ್ನು ಮುಂದುವರಿಸುವುದಾಗಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ನೇಕಾರರ ನಿಯೋಗವು ಇಂದು ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ವೇಳೆ ಮಾತನಾಡಿ, 10 ಹೆಚ್.ಪಿ(10HP) ವರೆಗಿನ ವಿದ್ಯುತ್ ಘಟಕಗಳಿಗೆ 250 ಯುನಿಟ್ ವರೆಗೆ ಉಚಿತ ವಿದ್ಯುತ್ ಪೂರೈಸಲಾಗುತ್ತದೆ. ಈ ಬಗ್ಗೆ ಶೀಘ್ರವೇ ಆದೇಶ ಹೊರಡಿಸಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ : ಸಿದ್ದರಾಮಯ್ಯ ಸರ್ಕಾರ ಉರುಳೋದು ಇಲ್ಲ, ಹೋಗೋದು ಇಲ್ಲ : ಸಚಿವ ವೆಂಕಟೇಶ್

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಹೆಚ್.ಎಂ. ರೇವಣ್ಣ, ಹಂಪಿ ಗಾಯತ್ರಿ ಪೀಠದ ಶ್ರೀ ದಯಾನಂದಪುರಿ ಸ್ವಾಮೀಜಿ, ತಪಸಿಹಳ್ಳಿ ದಿವ್ಯಜ್ಞಾನಾನಂದ ಸ್ವಾಮೀಜಿ, ಬಾಗಲಕೋಟೆ ಜಿಲ್ಲೆ ನೀರಲಕೇರಿ ಸಿದ್ಧಾರೂಢ ಮಠದ ಶ್ರೀ ಘನಲಿಂಗ ಸ್ವಾಮೀಜಿ, ಧಾರವಾಡದ ಶಿವಾನಂದ ಮಠದ ಶಿವಾನಂದ ಸ್ವಾಮಿಗಳು, ರಾಜ್ಯ ನೇಕಾರರ ಸಮುದಾಯಗಳ ಒಕ್ಕೂಟದ ರಾಜ್ಯ ಅಧ್ಯಕ್ಷ ಬಿ.ಎಸ್. ಸೋಮಶೇಖರ ಮತ್ತಿತರ ನೇಕಾರ ಮುಖಂಡರು ಇದ್ದರು.

Exit mobile version