Site icon PowerTV

ಡಿಕೆಶಿ ಹೇಳಿಕೆಗೆ ಅಶ್ವತ್ಥನಾರಾಯಣ ತಿರುಗೇಟು

ಬೆಂಗಳೂರು : ಸಿಂಗಾಪುರದಲ್ಲಿ ಕುಳಿತುಕೊಂಡು ಕರ್ನಾಟಕ ಸರ್ಕಾರದ ವಿರುದ್ಧ ತಂತ್ರ ರೂಪಿಸುತ್ತಿದ್ದಾರೆ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿಕೆಗೆ ಮಾಜಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆಗೆ ಹಲವು ದೃಷ್ಟಿಕೋನ ಇದೆ. ಸರ್ಕಾರದಲ್ಲಿ ಏನೂ ಸರಿಯಿಲ್ಲ ಅನ್ನೋದು ಗೊತ್ತಾಗುತ್ತಿದೆ. ಒಳಗಿನಿಂದಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಿಸುವ ಕೆಲಸಗಳು ಆಗುತ್ತಿವೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್​ ನಾಯಕರ ಸಹಕಾರ ಇಲ್ಲದೆ ಏನೂ ಆಗುವುದಿಲ್ಲ. ಬಹಳ ದೊಡ್ಡವರೇ ಇದಕ್ಕೆ ಸಹಕಾರ ಕೊಟ್ಟಂತೆ ಕಾಣುತ್ತಿದೆ ಎಂದು ಹೇಳಿದ ಅಶ್ವತ್ಥ ನಾರಾಯಣ, ನನ್ನನ್ನು ಸಿಎಂ‌ ಮಾಡಲಿಲ್ಲ ಅಂದರೆ ಈ ಸರ್ಕಾರ ಉಳಿಸಲ್ಲ ಅಂತ ಡಿ.ಕೆ. ಶಿವಕುಮಾರ್ ಪರೋಕ್ಷವಾಗಿ ಎಚ್ಚರಿಕೆ ಕೊಟ್ಟಂತಿದೆ. ಕುಮಾರಸ್ವಾಮಿ ಅವರು ಯಾವ ರೀತಿ ಸರ್ಕಾರ ಬೀಳಿಸುತ್ತಾರೆ ಅಂತನೂ ಶಿ‌ವಕುಮಾರ್ ಹೇಳಬೇಕು ಎಂದು ಹೇಳಿದ್ದಾರೆ.

Exit mobile version