Site icon PowerTV

ಬ್ಯಾಂಕ್ ಸ್ಥಳಾಂತರಕ್ಕೆ ಗ್ರಾಮಸ್ಥರ ಆಕ್ರೋಶ

ರಾಮನಗರ : ಗ್ರಾಮದಲ್ಲಿದ್ದ ಬ್ಯಾಂಕ್ ಬೇರೆಡೆಗೆ ಸ್ಥಳಾಂತರ ಖಂಡಿಸಿ ಬ್ಯಾಂಕ್​ಗೆ ಮುತ್ತಿಗೆ ಹಾಕಿ ಗ್ರಾಮಸ್ಥರು ಪ್ರತಿಭಟನೆ ಮಾಡಿರುವ ಘಟನೆ ರಾಮನಗರ ತಾಲೂಕಿನ ಸುಗ್ಗನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿದ್ದ ಕೆನರಾ ಬ್ಯಾಂಕ್ ಶಾಖೆಯನ್ನ ಬೇರೆಡೆಗೆ ಸ್ಥಳಾಂತರ ಮಾಡಲಾಗುತ್ತಿದೆ. ಇದರಿಂದ ಗ್ರಾಮಸ್ಥರಿಗೆ ಅನಾನುಕೂಲ ಆಗಲಿಂದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಟ್ಟಬದ್ದ ಹಿತಾಸಕ್ತಿಗೆ ಒಳಗಾದ ಕೆಲವರು ಬ್ಯಾಂಕ್ ಶಾಖೆಯನ್ನ ಬೇರೆಡೆ ವರ್ಗಾವಣೆ ಮಾಡಲು‌ ಸಂಚು ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಬ್ಯಾಂಕ್ ವರ್ಗಾವಣೆ ಮಾಡಲು ಬಿಡುವುದಿಲ್ಲ. ಈ ಜಾಗದಲ್ಲಿಯೇ ಶಾಖೆ ಮುಂದುರೆಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Exit mobile version