Site icon PowerTV

ಟೊಮೊಟೊ ಬಾತ್ ತಿಂದು ವಿದ್ಯಾರ್ಥಿಗಳು ಅಸ್ವಸ್ಥ

ಚಾಮರಾಜನಗರ : ಟೊಮೊಟೊ ಬಾತ್ ತಿಂದು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಗರಗನಹಳ್ಳಿಯಲ್ಲಿ ನಡೆದಿದೆ.

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಗ್ಗೆ ಉಪಹಾರ ಸೇವಿಸಿ ಸ್ವಲ್ಪ ಸಮಯದಲ್ಲೇ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. 207 ವಿದ್ಯಾರ್ಥಿಗಳಲ್ಲಿ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ತಿಂದ ಕೂಡಲೇ ಅಸ್ವಸ್ಥರಾಗಿದ್ದಾರೆ. ಸಮೀಪದ ಹೊರೆಯಾಲ ಗ್ರಾಮದ ಪ್ರಾಥಮಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಪ್ರಥಮ ಚಿಕಿತ್ಸೆ ನಂತರ ಬೇಗೂರಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಬೇಗೂರು ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಅಸ್ವಸ್ಥಗೊಂಡಿದ್ದರು ಎಂದು ವೈದ್ಯರು ಹೇಳಿದ್ದಾರೆ.

ಈ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಪ್ರಜ್ವಲ್ ಎಂಬ ವಿದ್ಯಾರ್ಥಿಗೆ ಅತಿಯಾದ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಆತನನ್ನು ಹೊರೆಯಾಲ ಆಸ್ಪತ್ರೆಯಿಂದ ಬೇಗೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Exit mobile version