Site icon PowerTV

ದ್ವಿತೀಯ PUC 2ನೇ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು : 2023ನೇ ಸಾಲಿನ ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ.

ಈ ಕುರಿತು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಆ.21ರಿಂದ ಸೆಪ್ಟೆಂಬರ್ 2ರವರೆಗೆ 2ನೇ ಬಾರಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ.

ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮತ್ತು ಕಡಿಮೆ ಅಂಕ ಬಂದು ಪೂರಕ ಪರೀಕ್ಷೆ ಬರೆಯಲು ನಿರ್ಧರಿಸಿರುವ ವಿದ್ಯಾರ್ಥಿಗಳು ಮರು ಪರೀಕ್ಷೆಗೆ ಹಾಜರಾಗುವಂತೆ ಮಂಡಳಿ ತಿಳಿಸಿದೆ.

https://kseab.Karnataka.gov.in ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಪೂರಕ ಪರೀಕ್ಷೆ-2 ವೇಳಾಪಟ್ಟಿ

Exit mobile version