Site icon PowerTV

ಇಂದು ಕ್ಯಾಮೆರಾ ಇಟ್ಟವರು ನಾಳೆ ಬಾಂಬ್ ಇಡ್ತಾರೆ : ಯಶ್‌ಪಾಲ್ ಸುವರ್ಣ

ಉಡುಪಿ : ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟನಾ? ಎಂದು ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ಗುಡುಗಿದ್ದಾರೆ.

ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣವನ್ನು ಕೇಂದ್ರೀಯ ಸಂಸ್ಥೆಯಿಂದ ತನಿಖೆಗೆ ಒತ್ತಾಯಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ಅವರು, ಇಂದು ಕ್ಯಾಮೆರಾ ಇಟ್ಟ ವಿದ್ಯಾರ್ಥಿಗಳು ನಾಳೆ ಬಾಂಬ್ ಇಡಲು ಹಿಂಜರಿಯುವುದಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ : ‘ಯಾರೂ ಮಾತನಾಡಂಗಿಲ್ಲ..!’ ಅಂತ ಡಿಸೈಡ್ ಆಗಿದೆ : ಡಿ.ಕೆ ಶಿವಕುಮಾರ್

ಕಿವುಡ ಹಾಗೂ ಮೂಕರಾಗಿದ್ದಾರೆ

ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಕಿವುಡ ಹಾಗೂ ಮೂಕರಾಗಿದ್ದಾರೆ. ಈ ಪ್ರಕರಣದ ತನಿಖೆಯನ್ನು ಕೇಂದ್ರಕ್ಕೆ ಒಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಪರಮೇಶ್ವರ್ ಅವರು ಈ ಪ್ರಕರಣವನ್ನು ಮಕ್ಕಳಾಟ ಎಂದಿದ್ದಾರೆ. ಅವರ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟನಾ? ಎಂದು ಯಶ್‌ಪಾಲ್‌ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Exit mobile version