Site icon PowerTV

ವಿಡಿಯೋ ಚಿತ್ರೀಕರಣ : ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು

ಉಡುಪಿ : ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು ದೊರೆತಿದೆ.

ಆರೋಪಿಗಳಾದ ಶಬನಾಜ್, ಆಲ್ಫಿಯಾ, ಆಲಿಮಾತುಲ್ ಶಾಫಿಯಾಗೆ ಇಂದು ಉಡುಪಿ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ.

ರಾಷ್ಟ್ರಮಟ್ಟದಲ್ಲಿ ಭಾರಿ ವಿವಾದ ಎಬ್ಬಿಸಿದ್ದ ಉಡುಪಿಯ ನೇತ್ರ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿನಿಯ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಲಾಗಿದೆ.

ಐಪಿಸಿ ಸೆಕ್ಷನ್ 509, 204, 175, 34 ಐಪಿ,ಸಿ,ಮತ್ತು 66(E) IT ACT ಅಡಿಯಲ್ಲಿ ಸುಮೋಟೋ ಕೇಸ್​ ದಾಖಲಿಸಿಕೊಂಡಿದ್ದು, ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರು ಜಾಮೀನು ಪಡೆದುಕೊಂಡಿದ್ದಾರೆ.

Exit mobile version