ಬೆಂಗಳೂರು : ತಮಿಳುನಾಡಿನ ರಾಮೇಶ್ವರಂನಲ್ಲಿ ‘ಡಾ ಎಪಿಜೆ ಅಬ್ದುಲ್ ಕಲಾಂ, ಮೆಮೊರೀಸ್ ನೆವರ್ ಡೈ’ ಪುಸ್ತಕದ ಬಿಡುಗಡೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಧಾನಿ ಮೋದಿಯವರ ನಾಯಕತ್ವವನ್ನು ಕೊಂಡಾಡಿದ್ದಾರೆ.
ವಿಜ್ಞಾನಿ ಮತ್ತು ದಿವಂಗತ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ದೃಷ್ಟಿಕೋನದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶವು ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಹೆಚ್ಚಿನ ಪ್ರಗತಿಯನ್ನು ಸಾಧಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಬಾಹ್ಯಾಕಾಶ ವಿಜ್ಞಾನದಲ್ಲಿ ಅವಕಾಶ
ಭಾರತದ ಬಾಹ್ಯಾಕಾಶ ತಂತ್ರಜ್ಞಾನಕ್ಕೆ ಕಲಾಂ ಅವರ ಅದ್ಭುತ ಸೇವೆಗಳನ್ನು ಸ್ಮರಿಸಿದ್ದಾರೆ. ಪ್ರಧಾನಿ ಮೋದಿಯವರ ನಾಯಕತ್ವದ ಅಡಿಯಲ್ಲಿ ನಮ್ಮ ವಿದ್ಯಾರ್ಥಿಗಳು, ಯುವಕರು ಮತ್ತು ಅವರ ಸ್ಟಾರ್ಟ್‌ಅಪ್‌ಗಳಿಗೆ ಬಾಹ್ಯಾಕಾಶ ವಿಜ್ಞಾನದಲ್ಲಿ ಅವಕಾಶಗಳು ಮುಕ್ತವಾಗಿವೆ ಎಂದಿದ್ದಾರೆ.
ಎಪಿಜೆ ಅಬ್ದುಲ್ ಕಲಾಂ ಅವರ ಬಾಹ್ಯಾಕಾಶ ವಿಜ್ಞಾನದ ಸಾಧನೆಗಳ ಕನಸು, ಪ್ರಧಾನಿ ಮೋದಿಯವರ ಆವಿಷ್ಕಾರಗಳು ಮತ್ತು ಹೊಸ ಉಪಕ್ರಮಗಳಿಂದ ನನಸಾಗಲಿದೆ. ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಭಾರತವು ಇಡೀ ಜಗತ್ತನ್ನು ಮುನ್ನಡೆಸುತ್ತದೆ ಎಂದು ನಾನು ನಂಬುತ್ತೇನೆ ಎಂದು ಅಮಿತ್ ಶಾ ಹೇಳಿದ್ದಾರೆ.



Pinco mobil versiyası sürətlidir. Qazanmaq istəyirsənsə, indi bu linkdən başla — https://pinkoaz.website.yandexcloud.net/. Pinco ilə futbol mərclərinə başla.
Pinco oyun saytında hər şey asandır.