Site icon PowerTV

ಪ್ರದೀಪ್ ಈಶ್ವರ್​ಗೆ ಸುಧಾಕರ್ ಸವಾಲು

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಹಾಲಿ ಹಾಗೂ ಮಾಜಿ ಶಾಸಕರ ನಡುವೆ ಮಾತಿನ ಸಮರ ಮುಂದುವರೆದಿದೆ.

ಇಬ್ಬರೂ ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧೆ ಮಾಡೋಣ, ಯಾರಿಗೆ ಎಷ್ಟು ವೋಟ್ ಬರುತ್ತೆ ನೋಡೋಣ ಎಂದು ಶಾಸಕ ಪ್ರದೀಪ್ ಈಶ್ವರ್‌ಗೆ ಮಾಜಿ ಸಚಿವ ಸುಧಾಕರ್ ಸವಾಲು ಹಾಕಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಬಿಟ್ಟು ಸ್ವತಂತ್ರವಾಗಿ ಸ್ಪರ್ಧೆ ಮಾಡುವಂತೆ ಪ್ರದೀಪ್ ಈಶ್ವರ್​ಗೆ ಸವಾಲು ಹಾಕಿದ್ದಾರೆ.

ಅಲ್ಲದೆ, ನಾನು ಸಹ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲುತ್ತೇನೆ. ನಿಮಗೆ ಎಷ್ಟು ವೋಟು ಬರುತ್ತದೆ. ನನಗೆ ಎಷ್ಟು ವೋಟು ಬರುತ್ತದೆ ನೋಡೋಣ. ಒಂದು ವರ್ಷದಲ್ಲಿ ರಾಜೀನಾಮೆ ಕೊಟ್ಟು BJP ಇಲ್ಲದ ಕಡೆ ಗೆದ್ದು ನನ್ನ ಶಕ್ತಿ ತೋರಿಸಿದ್ದೇನೆ. ಇದೇ ರೀತಿ ಗೆದ್ದು ತೋರಿಸುವಂತೆ ಸವಾಲು ಹಾಕಿದ್ದಾರೆ. ಈಶ್ವರ್ ಮುಖ ನೋಡಿದರೆ 5 ಸಾವಿರ ವೋಟು ಬರುವುದಿಲ್ಲ ಎಂದು ಸುಧಾಕರ್ ವ್ಯಂಗ್ಯವಾಡಿದ್ದಾರೆ.

Exit mobile version