Site icon PowerTV

ರಾಹುಲ್​ಗೆ ಹುಡುಗಿ ಹುಡುಕಿ ಕೊಡಿ : ಸೋನಿಯಾ ಗಾಂಧಿ ಆಫರ್

ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಾರ್ವಜನಿಕರನ್ನು ತಲುಪುವ ಪ್ರಯತ್ನದಲ್ಲಿ ಹರಿಯಾಣದ ಸೋನಿಪತ್‌ನ ರೈತ ಮಹಿಳೆಯರೊಂದಿಗೆ ಸಂವಾದದಲ್ಲಿ ನಿರತರಾಗಿದ್ದಾರೆ. ಅವರೊಂದಿಗಿನ ಸಂಭಾಷಣೆಯ ವೀಡಿಯೊಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಇತ್ತೀಚೆಗೆ ಮಹಿಳೆಯರ ಹೊಲಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸೋನಿಯಾ ಗಾಂಧಿ, ತಮ್ಮ ನಿವಾಸದಲ್ಲಿ ರೈತ ಮಹಿಳೆಯರಿಗೆ ಭೋಜನಕೂಟ ಏರ್ಪಡಿಸುವ ಭರವಸೆ ನೀಡಿದ್ದರು. ಕೊಟ್ಟ ಮಾತಿನಂತೆ ರೈತ ಮಹಿಳೆಯರನ್ನ ಪ್ರಿಯಾಂಕಾ ಗಾಂಧಿ ಮನೆಗೆ ಆಹ್ವಾನಿಸಿ, ಸೋನಿಯಾ ಗಾಂಧಿ ಜೊತೆಗೆ ಭೋಜನಕ್ಕೆ ವ್ಯವಸ್ಥೆ ಮಾಡಿದ್ದರು.

ರಾಹುಲ್ ಮದುವೆ ಯಾವಾಗ?

ಹೀಗೆ ಮನೆಗೆ ಬಂದ ರೈತ ಮಹಿಳೆಯರ ಪೈಕಿ ಓರ್ವ ಮಹಿಳೆ ರಾಹುಲ್ ಗಾಂಧಿ ಅವರ ಮದುವೆ ಯಾವಾಗ? ಮಾಡಲಿದ್ದೀರಿ ಎಂದು ಸೋನಿಯಾ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ನಗುತ್ತಲೇ ಉತ್ತರಿಸಿದ ಸೋನಿಯಾ ಗಾಂಧಿ ‘ನೀವೆ ಹುಡುಗಿಯನ್ನ ಹುಡುಕಿ..’ ಎಂದು ನಗೆ ಚಟಾಕಿ ಹಾರಿಸಿದ್ದಾರೆ. ರಾಹುಲ್ ಗಾಂಧಿ ಹಂಚಿಕೊಂಡಿರುವ ಈ ವಿಡಿಯೋ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

Exit mobile version