Site icon PowerTV

ಚಲಿಸುತ್ತಿದ್ದ ಟ್ರೈನ್ ಹತ್ತಲು ಪ್ರಯತ್ನಿಸಿದ ವ್ಯಕ್ತಿಯ ರಕ್ಷಣೆ

ಮಂಗಳೂರು : ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಆಯಾ ತಪ್ಪಿ ಬೀಳುತ್ತಿದ್ದ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿ ರಕ್ಷಿಸಿ ಸಮಯಪ್ರಜ್ಞೆ ಮೆರೆದಿರುವ ಘಟನೆ ಜಿಲ್ಲೆಯ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ನಡೆದಿದೆ.

ಕೇರಳದ ಕಣ್ಣೂರಿನ ವಯಲ್ವೀಡು ನಿವಾಸಿ ಶಂಕರ್ ಬಾಬು (70) ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ. ಇವರು ಗುರುವಾರ ಸಂಜೆ 6.15ರ ವೇಳೆ ಮಲಬಾರ್ ಎಕ್ಸ್‌ಪ್ರೆಸ್ ರೈಲು ಚಲಿಸುತ್ತಿದ್ದ ವೇಳೆ ಹತ್ತಲು ಹೋಗಿ ಆಯ ತಪ್ಪಿ ಹ್ಯಾಂಡಲ್‌ನಲ್ಲಿ ನೇತಾಡುತ್ತಿದ್ದರು.

ಇದನ್ನು ಓದಿ : ಬಿಜೆಪಿ ಪಾರ್ಟಿ ಆಡಳಿತಾತ್ಮಕ ಬದಲಾವಣೆ: ಸಿ.ಟಿ ರವಿಗೆ ಕೋಕ್!

ರೈಲು ಹತ್ತಲು ಸಾಧ್ಯವಾಗದೆ ಹ್ಯಾಂಡಲ್ ನಲ್ಲಿ ನೇತಾಡುತ್ತಿದ್ದ ವ್ಯಕ್ತಿಯನ್ನು ಗಮನಿಸಿದ ಆರ್‌ಪಿಎಫ್ ಸಿಬ್ಬಂದಿ ಪ್ರಕಾಶ್ ಅವರು ಶಂಕರ್ ಬಾಬು ಅವರನ್ನು ರಕ್ಷಿಸಿದ್ದಾರೆ. ಪ್ರಕಾಶ್ ಅವರು ಸಮಯಪ್ರಜ್ಞೆಯಿಂದ ಗಮನಿಸದಿದ್ದರೆ ಶಂಕರ್ ಅವರು ಹಳಿ ಮತ್ತು ರೈಲಿನ ನಡುವೆ ಸಿಲುಕಿ ಪ್ರಾಣವನ್ನೇ ಕಳೆದುಕೊಳ್ಳಬೇಕಿತ್ತು.

Exit mobile version