Wednesday, August 27, 2025
HomeUncategorizedಪಿಟಿಸಿಎಲ್​ ಕಾಯ್ದೆ: ದಲಿತರ ಅಹೋರಾತ್ರಿ ಧರಣಿ ವಾಪಾಸ್​!

ಪಿಟಿಸಿಎಲ್​ ಕಾಯ್ದೆ: ದಲಿತರ ಅಹೋರಾತ್ರಿ ಧರಣಿ ವಾಪಾಸ್​!

ಬೆಂಗಳೂರು : ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದ 208 ದಿನಗಳಿಂದ ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿಗೆ ಆಗ್ರಹಿಸಿ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ ಮತ್ತು ಎಸ್‌ಸಿ, ಎಸ್‌ಟಿ ಪಿಟಿಸಿಎಲ್‌ ಕಾಯ್ದೆ ಭೂ ವಂಚಿತರ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆಸುತ್ತಿದ್ದ ಅಹೋರಾತ್ರಿ ಹೋರಾಟ ಅಂತ್ಯಗೊಂಡಿದೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ 158.81ಕೋಟಿ ರೂ.ಗಳ ಹೆಚ್ಚುವರಿ ಕಾಮಗಾರಿ ಶೀಘ್ರ: ಸಿಎಂ

ಪ್ರತಿಭಟನಾ ಸ್ಥಳಕ್ಕೆ ಸಮಾಜ ಕಲ್ಯಾಣ ಸಚಿವ ಡಾ. ಎಚ್ ಸಿ ಮಹದೇವಪ್ಪ ಭೇಟಿ ನೀಡಿ ಆದೇಶ ಪತ್ರ ನೀಡಿದ ಈ ಹಿನ್ನೆಲೆ ಹೋರಾಟಗಾರರು ಪ್ರತಿಭಟನೆ ಕೈಬಿಟ್ಟಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಚಿವ ಡಾ. ಎಚ್ ಸಿ ಮಹದೇವಪ್ಪ, ಸರ್ಕಾರ ದಲಿತ ಸಮುದಾಯದ ಹಿತ ರಕ್ಷಣೆಗೆ ಬದ್ಧವಾಗಿದ್ದು, ವಿಶೇಷವಾಗಿ ಭೂಮಿ ರಕ್ಷಣೆಗೆ ಅಗತ್ಯವಿರುವ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ. ಮೊದಲ ಹಂತದಲ್ಲಿ ಪಿಟಿಸಿಎಲ್‌ ಕಾಯ್ದೆಗೆ  ತಿದ್ದುಪಡಿ ತರಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಬಳಿಕ ಮಾತನಾಡಿದ ಮೈಸೂರಿನ ಉರಿಲಿಂಗ ಪೆದ್ದಿ ಮಹಾ ಸಂಸ್ಥಾನ ಮಠದ ಜ್ಞಾನ ಪ್ರಕಾಶ್‌ ಸ್ವಾಮೀಜಿ, ಸರ್ಕಾರ ಕೊಟ್ಟ ಮಾತಿನಂತೆ ನುಡಿದಂತೆ ನಡೆದಿದೆ. ಶತಶತಮಾನಗಳಿಂದ ಶೋಷಣೆಗೆ ಒಳಗಾದವರಿಗೆ ಮರು ಬದುಕು ಕಟ್ಟಿಕೊಳ್ಳಲು ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ. 2017 ರಲ್ಲಿ ಸುಪ್ರೀಂಕೋರ್ಟ್‌ ನೆಕ್ಕಂಟಿರಾಮಲಕ್ಷ್ಮಿ ಮತ್ತು ಕರ್ನಾಟಕ ಸರ್ಕಾರ ಪ್ರಕರಣದಲ್ಲಿ ನೀಡಿದ ತೀರ್ಪಿನಿಂದ ಲಕ್ಷಾಂತರ ಕುಟುಂಬಗಳ ಭೂಮಿ ಕೈ ತಪ್ಪಿದರಿಂದ ಇಡೀ ಸಮುದಾಯ ಭೂಮಿಗಳನ್ನು ಕಳೆದುಕೊಂಡು ಬೀದಿಪಾಲಾಗಿ ತಮ್ಮ ಜೀವನವನ್ನೇ ಕಳೆದುಕೊಂಡಿದ್ದರು. ಇದೀಗ 6 ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದೆ. ಬಿಜೆಪಿ ಸುಳ್ಳು ಭರವಸೆಗಳನ್ನು ನೀಡಿ ಸಮುದಾಯವನ್ನು ದಾರಿ ತಪ್ಪಿಸಿತ್ತು ಎಂದು ಅವರು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments