Site icon PowerTV

ತಮಿಳುನಾಡು ಸರ್ಕಾರದ ವಿರುದ್ಧ ಅಣ್ಣಾಮಲೈ ಕಿಡಿ

ಬೆಂಗಳೂರು : ಭ್ರಷ್ಟ ಡಿಎಂಕೆ ಸರ್ಕಾರದ ಸೇಡಿನ ಕ್ರಮ ಜಾರಿಗೊಳಿಸುವುದಷ್ಟೇ ತಮಿಳುನಾಡು ಪೊಲೀಸರ ಕೆಲಸವೇ? ಎಂದು ಬಿಜೆಪಿಯ ತಮಿಳುನಾಡು ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಪ್ರಶ್ನಿಸಿದ್ದಾರೆ.

ಅಣ್ಣಾಮಲೈ ಅವರ ನೇತೃತ್ವದಲ್ಲಿ ಆರಂಭವಾಗಿರುವ ಎನ್ ಮಣ್ಣ್ ಎನ್ ಮಕ್ಕಳ್ ಯಾತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಮೇಶ್ವರಂನಲ್ಲಿ ಚಾಲನೆ ನೀಡಿದರು. ಇದೇ ವೇಳೆ, ತಮಿಳುನಾಡು ಸರ್ಕಾರದ ರಾಜಕೀಯ ಕ್ರಮಗಳ ವಿರುದ್ಧ ಅಣ್ಣಾಮಲೈ ವಾಗ್ದಾಳಿ ನಡೆಸಿದ್ದಾರೆ.

ಹಿರಿಯ ರಾಜಕೀಯ ವಿಶ್ಲೇಷಕ, ಯೂಟ್ಯೂಬರ್, ಪ್ರಸಿದ್ಧ ಪ್ರಕಾಶನ ಸಂಸ್ಥೆಯ ಸಂಸ್ಥಾಪಕ ಬದರಿ ಶೇಷಾದ್ರಿ ಅವರನ್ನು ಬಂಧಿಸಿರುವ ವಿಚಾರವಾಗಿ ತಮಿಳುನಾಡಿನ ಡಿಎಂಕೆ ಸರ್ಕಾರದ ವಿರುದ್ಧ ಅಣ್ಣಾಮಲೈ ಕಿಡಿಕಾರಿದ್ದಾರೆ.

ಶೇಷಾದ್ರಿ ಅವರನ್ನು ಇಂದು ಬೆಳಗ್ಗೆ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಇದನ್ನು ತಮಿಳುನಾಡು ಬಿಜೆಪಿ ಬಲವಾಗಿ ಖಂಡಿಸುತ್ತದೆ. ಈ ಭ್ರಷ್ಟ ಡಿಎಂಕೆ ಸರ್ಕಾರವು ಸಾಮಾನ್ಯ ಜನರ ಅಭಿಪ್ರಾಯಗಳನ್ನು ಹತ್ತಿಕ್ಕಲು ಬಂಧನಕ್ಕೆ ಆದೇಶ ನೀಡುತ್ತಿದೆ. ಭ್ರಷ್ಟ ಡಿಎಂಕೆ ಸರ್ಕಾರದ ಸೇಡಿನ ಕ್ರಮಗಳನ್ನು ಜಾರಿಗೊಳಿಸುವುದು ಮಾತ್ರ ತಮಿಳುನಾಡು ಪೊಲೀಸರ ಕೆಲಸವೇ ಎಂದಿದ್ದಾರೆ.

Exit mobile version