Site icon PowerTV

ಉಡುಪಿ ಪ್ರಕರಣದ ತನಿಖಾಧಿಕಾರಿ ಬದಲಾವಣೆ

ಬೆಂಗಳೂರು : ಉಡುಪಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ಓರ್ವ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಿದ್ದ ಪ್ರಕರಣ ದೊಡ್ಡ ವಿವಾದವಾಗಿ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದೆ.

ಬಿಜೆಪಿ ಪ್ರತಿಭಟನೆ ನಂತರ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ಆಗಿದ್ದು, ಇದೀಗ ಪ್ರಕರಣದ ತನಿಖಾಧಿಕಾರಿಯಾಗಿದ್ದ ಮಲ್ಪೆ ಇನ್ಸ್​ಪೆಕ್ಟರ್​ ಮಂಜುನಾಥ್ ಗೌಡ ಅವರನ್ನು ಬದಲಾವಣೆ ಮಾಡಲಾಗಿದೆ.

ಕುಂದಾಪುರ ಡಿವೈಎಸ್​ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯನ್ನಾಗಿ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್​ ನೇಮಕ ಮಾಡಿದ್ದಾರೆ. ಆರಂಭದಿಂದ ತನಿಖೆ ನಡೆಸಿಕೊಂಡು ಬಂದಿದ್ದ ಮಲ್ಪೆ ಇನ್ಸ್​ಪೆಕ್ಟರ್ ಮಂಜುನಾಥ್ ಗೌಡರನ್ನು ಬದಲಾಯಿಸಬೇಕೆಂಬ ಒತ್ತಾಯ ಕೇಳಿಬಂದಿತ್ತು. ಅದರಂತೆಯೇ ಇದೀಗ ಬದಲಾವಣೆ ಮಾಡಿ, ಕುಂದಾಪುರ ಡಿವೈಎಸ್​ಪಿ ಬೆಳ್ಳಿಯಪ್ಪರಿಗೆ ತನಿಖೆಯ ಜವಾಬ್ದಾರಿ ನೀಡಲಾಗಿದೆ.

Exit mobile version