Site icon PowerTV

ಕಾಂಗ್ರೆಸ್​ ಸೇರಲು ತೆರೆಮರೆಯ ಕಸರತ್ತು ನಡೆಸುತ್ತಿರುವ ಬಾಂಬೆ ಬಾಯ್ಸ್!

ಬೆಂಗಳೂರು : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಬಾಂಬೆ ಬಾಯ್ಸ್​ ಮತ್ತೆ ಕಾಂಗ್ರೆಸ್​ ಕದ ತಟ್ಟಲು ಮುಂದಾಗಿದ್ದಾರೆ ಎನ್ನುವ ಮಾತುಗಳಿ ಕೇಳಿಬರುತ್ತಿದೆ.

ಇದನ್ನೂ ಓದಿ: ರಾಹುಲ್‌ಗೆ ಸೂಕ್ತ ಹೆಣ್ಣು ಹುಡುಕಿ : ಸೋನಿಯಾ ಗಾಂಧಿ!

ಆಪರೇಷನ್​ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರ್ಪಡೆಗೊಂಡಿದ್ದ ನಾಯಕರು ಮರಳಿ ಕಾಂಗ್ರೆಸ್​ ಸೇರ್ಪಡೆಗೆ ತೆರೆ ಮರೆಸ ಸರ್ಕಸ್​ ನಡೆಸುತ್ತಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಬಿಜಪಿ ಪಕ್ಷಕ್ಕೆ ಸೂಕ್ತ ನಾಯಕತ್ವ ಇಲ್ಲದೆ ವಲಸಿಗ ನಾಯಕರಲ್ಲಿ ಆತಂಕ ಸೃಷ್ಟಿಯಾಗಿದೆ, ಇನ್ನೂ ಬಿಜೆಪಿ ನಾಯಕ ಬಿಎಸ್‌ ಯಡಿಯೂರಪ್ಪ ಸೈಡ್‌ಲೈನ್‌ ಬಳಿಕ ಪಕ್ಷಾಂತರ ಮಾಡಿದ್ದ ನಾಯಕರಲ್ಲಿ ತಮ್ಮ ಅಸ್ತಿತ್ವದ ಪ್ರಶ್ನೆ ಮೂಡಿದ್ದು ಅತಂತ್ರರಾಗಿದ್ದಾರೆ.

ಈಗಾಗಲೇ ಕಾಂಗ್ರೆಸ್‌ ಪಕ್ಷ ತೊರೆದು ಬಿಜೆಪಿ ಸೇರಿ ಪಶ್ಚಾತ್ತಾಪ ಡುವಂತಾಗಿದೆ ಎಂದು ಎಂಟಿಬಿ ನಾಗರಾಜ್, ಎಸ್.ಟಿ. ಸೋಮಶೇಖರ್‌, ಮುನಿರತ್ನ, ಬೈರತಿ ಬಸವರಾಜು ಮತ್ತೆ ಕಾಂಗ್ರೆಸ್​ ಸೇರ್ಪಡೆಯಾಗಲು ತೆರೆಮರೆಯಲ್ಲಿ ಗೌಪ್ಯವಾಗಿ ಕಸರತ್ತು ಮಾಡುತ್ತಿದ್ದಾರೆ.

ಇದಕ್ಕೂ ಮೊದಲು ಕಾಂಗ್ರೆಸ್ ತೊರೆದು ತಪ್ಪು ಮಾಡಿದೆ ಎಂದು ಎಂಟಿಬಿ ನಾಗರಾಜ್​ ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ಸೇರಲು ಮಿತ್ರಮಂಡಳಿ ಒಲವು ತೋರಿದ್ದು ಮಾಜಿ ಸಚಿವ ಡಾ.ಕೆ. ಸುಧಾಕರ್ ಕೂಡ ತೆರೆಮರೆಯಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತರ ಬಳಿ ರಹಸ್ಯ ಸಭೆ ನಡೆಸಿದ್ದಾರೆ ಎನ್ನಲಾಗಿದೆ.

Exit mobile version