Site icon PowerTV

ಫಾಲ್ಸ್​ನಲ್ಲಿ ಕೊಚ್ಚಿಹೋಗಿದ್ದ ಶರತ್​ ಮೃತ ದೇಹ ಪತ್ತೆ!

ಉಡುಪಿ:ಜಲಪಾತ ವೀಕ್ಷಣೆ ವೇಳೆ ರೀಲ್ಸ್ ಮಾಡಲು ಹೋಗಿ ಜಲಪಾತಕ್ಕೆ ಬಿದ್ದು, ಕೊಚ್ಚಿ ಹೋಗಿದ್ದ ಯುವಕ ಶರತ್ (23) ಮೃತದೇಹ ಪತ್ತೆಯಾಗಿದೆ. 5 ದಿನಗಳ ನಿರಂತರ ಶೋಧಕಾರ್ಯದ ಬಳಿಕ ಇಂದು ಮೃತದೇಹ ಪತ್ತೆಯಾಗಿದೆ.

ಇದನ್ನೂ ಓದಿ: ಅಪಘಾತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಣೆ!

ಕೊಲ್ಲೂರಿನ ಅರಿಶಿನ ಗುಂಡಿ ಜಲಪಾತದ ಬಳಿ ಸ್ನೇಹಿತನೊಂದಿಗೆ ರೀಲ್ಸ್ ಮಾಡಲು ಹೋಗಿದ್ದ ಭದ್ರಾವತಿ ಮೂಲದ ಶರತ್ ಕುಮಾರ್ ಕಾಲು ಜಾರಿ ಜಲಪಾತಕ್ಕೆ ಬಿದ್ದಿದ್ದ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಸುದ್ದಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು,ಮುಳುಗು ತಜ್ಞರು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಕಳೆದ ಒಂದು ವಾರದಿಂದ ಹಗಲು ರಾತ್ರಿ ಎನ್ನದೇ ಶೋಧ ಕಾರ್ಯಾಚರಣೆ ನಡೆಸಿದ ಪರಿಣಾಮ ಇಂದು ಯುವಕನ ಮೃತದೇಹ ಪತ್ತೆಯಾಗಿದೆ.

Exit mobile version