Site icon PowerTV

ಎಸ್​ಸಿಪಿ, ಟಿಎಸ್​ಪಿ ಸಭೆ ನಾಳೆ : ಸಿಎಂ ಭೇಟಿಯಾದ ಪರಮೇಶ್ವರ್​, ಪ್ರಿಯಾಂಕ್​ ಖರ್ಗೆ!

ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪಂಗಡಗಳ  ಅಭಿವೃದ್ದಿ ಗೆ ರೂಪಿಸಲಾಗಿರುವ ಎಸ್ಸಿಪಿ, ಟಿಎಸ್ಪಿ ಯೋಜನೆಗಳ ಕುರಿತು ಸಭೆಯನ್ನು ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದು ಇಂದು ಪೂರ್ವಭಾವಿಯಾಗಿ ಸಮುದಾಯದ ಸಚಿವರೊಂದಿಗೆ ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ: 7 ವಿದೇಶಿ ಉಪಗ್ರಹಗಳ ಯಶಸ್ವಿ ಉಡಾವಣೆ!

ಎಸ್ಸಿಪಿ ಮತ್ತು ಟಿಎಸ್​ಪಿ ಸಭೆಯನ್ನು ಸೋಮವಾರ ಹಮ್ಮಿಕೊಳ್ಳಲಾಗಿದ್ದು ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ರನ್ನು ಇಂದು ಸಿಎಂ ಅಧಿಕೃತ ನಿವಾಸದಲ್ಲಿ ಗೃಹ ಸಚಿವರಾದ ಡಾ.ಜಿ. ಪರಮೇಶ್ವರ್ ಮತ್ತು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್​ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಭೇಟಿ ಮಾಡಿ ಸಮುದಾಯದ ಹಲವು ವಿಚಾರಗಳಗಳ ಚರ್ಚೆ ಮತ್ತು ಸಲಹೆಗಳನ್ನು ನೀಡಲಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯಾದ್ಯಂತ ದಲಿತರ ಸಮುದಾಯದ ಜನತೆ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿದ್ದು ಇದನ್ನು ತಡೆಯುವ ನಿಟ್ಟಿನಲ್ಲಿ ಕಾಯ್ದೆಯ ಸಮರ್ಪಕ ಅನುಷ್ಟಾನ ಮತ್ತು ಬಳಕೆ ಕುರಿತು ಉಭಯ ಸಚಿವರು ಚರ್ಚೆ ನಡೆಸಲಿದ್ದಾರೆ.

ಇದೇ ವೇಳೆ ಉಡುಪಿಯ ಕಾಲೇಜು ಶೌಚಾಕಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣದ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಹೆಚ್ಚಾಗಿದೆ.

Exit mobile version