Site icon PowerTV

ಹಾಸನದಲ್ಲಿ ನಿರಂತರ ಮಳೆ : ಮನೆ ಗೋಡೆ ಕುಸಿದು ವ್ಯಕ್ತಿ ಸಾವು

ಹಾಸನ : ಜಿಲ್ಲೆಯಲ್ಲಿ ನಿರಂತರ ಮಳೆಗೆ ಮನೆ ಗೋಡೆ ಕುಸಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಆಲೂರು ತಾಲೂಕಿನ ಗುಡ್ಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಾಗರಾಜು (52) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕಳೆದ ವಾರದಿಂದ ಸುರಿದ ಮಳೆಗೆ ನಾಗರಾಜ್ ಎಂಬುವವರ ಮನೆ ಸಂಪೂರ್ಣ ಶಿಥಿಲಗೊಂಡಿತ್ತು. ತಮ್ಮ ಮನೆಯ ಪಕ್ಕದಲ್ಲಿ ಸ್ವಚ್ಛತೆ ಮಾಡುವ ಸಂದರ್ಭದಲ್ಲಿ ಏಕಾಏಕಿಯಾಗಿ ಮನೆ ಗೋಡೆ ಕುಸಿದು ನಾಗರಾಜ್ ಮೇಲೆ ಬಿದ್ದಿದೆ. ಈ ವೇಳೆ ನಾಗರಾಜ್ ಪತ್ನಿ ಲಕ್ಷ್ಮಮ್ಮ ಹಾಗೂ ಅವನ ಪುತ್ರ ಧರ್ಮರಾಜು ಕೂಲಿ ಕೆಲಸಕ್ಕೆಂದು ತೆರಳಿದ್ದರು.

ಇದನ್ನು ಓದಿ : Good News : ಇನ್ಮುಂದೆ ಕಾವೇರಿ ನೀರಿನ ಸಮಸ್ಯೆ ಇಲ್ಲ

ಕೂಲಿ ಕೆಲಸ ಮುಗಿಸಿ ಮನೆಗೆ ವಾಪಸ್ ಬಂದು ನೋಡಿದಾಗ ನಾಗರಾಜ್ ಗೋಡೆಯಡಿ ಸಿಲುಕಿ ಮೃತಪಟ್ಟಿರುವುದು ಬೆಳಕಿಗೆ ಬರುತ್ತದೆ. ಆಲೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನೆಡೆದಿದ್ದು, ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆಯನ್ನು ನೆಡೆಸಿದರು.

Exit mobile version