Site icon PowerTV

ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ ನವ ದಂಪತಿ ಆತ್ಮಹತ್ಯೆ

ಬೆಂಗಳೂರು ಗ್ರಾಮಾಂತರ : ಒಂದೂವರೆ ತಿಂಗಳ ಹಿಂದಷ್ಟೇ ನವ ಜೀವನಕ್ಕೆ ಕಾಲಿರಿಸಿದ್ದ ನವ ದಂಪತಿ ಕೃಷಿ ಹೊಂಡದಲ್ಲಿ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬಿಜ್ಜವಾರದಲ್ಲಿ ಈ ದುರ್ಘಟನೆ ನಡೆದಿದೆ. ರಮೇಶ್ (24) ಮತ್ತು ಸಹನಾ  (20) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.

ನಿನ್ನೆ ತಡರಾತ್ರಿ ನವದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆ ಮೃತ ದೇಹಗಳು ಕೃಷಿ ಹೊಂಡದಲ್ಲಿ ಪತ್ತೆಯಾಗಿದೆ. ಒಂದೂವರೆ ತಿಂಗಳ ಹಿಂದೆ ದಂಪತಿ ಪ್ರೀತಿಸಿ ವಿವಾಹವಾಗಿದ್ದರು. ಕುಟುಂಬ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಈ ಘಟನೆ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ವಿಜಯಪುರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಳಿಕ, ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ವಿಜಯಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

Exit mobile version