Site icon PowerTV

ಉಡುಪಿ ಪ್ರಕರಣದ ಹಿಂದೆ ಇಸ್ಲಾಮಿಕ್ ಕೈವಾಡ : ಪ್ರಮೋದ್ ಮುತಾಲಿಕ್

ಮೈಸೂರು : ಉಡುಪಿ ಕಾಲೇಜು ವಿಡಿಯೋ ಪ್ರಕರಣದ ಹಿಂದೆ ಇಸ್ಲಾಮಿಕ್ ಕೈವಾಡವಿದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ಸಂಬಂಧ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಆರಂಭದಲ್ಲೇ ಪ್ರಕರಣ ದಾರಿ ತಪ್ಪಿಸುವ ಕೆಲಸ‌ ಆಗಿತ್ತು. ಗೃಹ ಸಚಿವರ ಹೇಳಿಕೆ ನಾವು ಒಪ್ಪುವುದಿಲ್ಲ ಎಂದು ಕಿಡಿಕಾರಿದ್ದಾರೆ.

ಘಟನೆ ನಡೆಯದಿದ್ದರೆ ಸಿಎಂ ಸಿದ್ದರಾಮಯ್ಯ ಯಾಕೆ ಅಲ್ಲಿಗೆ ಹೋದ್ರು? ಮಕ್ಕಳಿಂದ ಯಾಕೆ ತಪ್ಪೋಪ್ಪಿಗೆ ಪತ್ರ ಬರೆಸಿದ್ದಾರೆ. ಅಂದ ಮೇಲೆ ತಪ್ಪು ಮಾಡಿದ್ದಾರೆ ಎಂದು ಅಲ್ವಾ? ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಆ ರೀತಿ ಹೇಳಬಾರದಿತ್ತು. ಎಷ್ಟು ವಿಡಿಯೋಗಳು ಅಫ್ಘಾನಿಸ್ಥಾನ, ಪಾಕಿಸ್ತಾನಕ್ಕೆ ಹೋಗಿದ್ದವೋ ಗೊತ್ತಿಲ್ಲ. ಎಲ್ಲವೂ ಸಮಗ್ರವಾಗಿ ತನಿಖೆಯಾಗಲಿ ಎಂದು ಪ್ರಮೋದ್ ಮುತಾಲಿಕ್ ಒತ್ತಾಯಿಸಿದ್ದಾರೆ.

Exit mobile version