Site icon PowerTV

ತಾಯಿ ಮೊಬೈಲ್ ಚಾರ್ಜರ್ ಕೊಡಲಿಲ್ಲ ಎಂದು ಯುವಕ ಆತ್ಮಹತ್ಯೆ

ತುಮಕೂರು : ತಾಯಿ ಮೊಬೈಲ್ ಚಾರ್ಜರ್ ಕೊಡಲಿಲ್ಲ ಎಂದು ಯುವಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆ ಹೋಬಳಿಯ ಸಿಂಗರೆಡ್ಡಿ ಹಳ್ಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ನಿಖಿಲ್ ಗೌಡ (18) ಆತ್ಮಹತ್ಯೆಗೆ ಶರಣಾದ ಯುವಕ.

ಸಿಂಗರೆಡ್ಡಿಹಳ್ಳಿಯ ಆಶಾ ಕಾರ್ಯಕರ್ತೆ ವರಲಕ್ಷ್ಮಮ್ಮ ಅವರ ಪುತ್ರ ಎಂದು ತಿಳಿದುಬಂದಿದೆ. ಮೃತ ನಿಖಿಲ್, ಪಾವಗಡ ಪಟ್ಟಣದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ.

ಇದನ್ನೂ ಓದಿ : ಜೋಕಾಲಿ ಆಡಲು ಹೋಗಿ ಪ್ರಾಣ ಕಳೆದುಕೊಂಡ 9ರ ಬಾಲಕಿa

ತಾಯಿಯೊಂದಿಗೆ ಜಗಳವಾಡಿದ್ದ ನಿಖಿಲ್

ಭಾನುವಾರ ರಜೆ ಇದ್ದ ಕಾರಣ ನಿಖಿಲ್ ಮನೆಯಲ್ಲಿಯೇ ಇದ್ದ. ಈ ವೇಳೆ ತಾಯಿಯೊಂದಿಗೆ ಜಗಳವಾಡಿದ್ದ. ನನಗೆ ಅದು ಕೊಡಿಸಿಲ್ಲ, ಇದು ಕೊಡಿಸಿಲ್ಲ ಅಂತ ಗಲಾಟೆ ಮಾಡಿದ್ದಾನೆ. ಬಳಿಕ ನನಗೆ ಮೊಬೈಲ್ ಚಾರ್ಜರ್ ಕೊಡು ಅಂತ ಕೇಳಿದ್ದಾನೆ. ಆಗ ನನ್ನ ಹತ್ತಿರ ಚಾರ್ಜರ್ ಇಲ್ಲ ಅಂತ ತಾಯಿ ಹೇಳಿದ್ದಾರೆ. ಇದರಿಂದ ಯುವಕ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

Exit mobile version