Site icon PowerTV

ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ ; ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಶಿವಮೊಗ್ಗ : ವಿದ್ಯುತ್ ಕಂಬಕ್ಕೆ ಬಸ್​ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರದ ಗೆಣಸಿನಕುಣಿ ಗ್ರಾಮದ ಬಳಿ ನಡೆದಿದೆ.

ಬಹುತೇಕ ವಿದ್ಯಾರ್ಥಿಗಳೇ ತುಂಬಿದ್ದ ಖಾಸಗಿ ಬಸವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಸಿಗಂದೂರು ಲಾಂಚ್ ನಿಲ್ಲುವ ಹೊಳೆಬಾಗಿಲು ಗ್ರಾಮದಿಂದ ಸಾಗರಕ್ಕೆ ಈ ಖಾಸಗಿ ಬಸ್ ಬರುತ್ತಿತ್ತು. ಈ ವೇಳೆ ಅವಘಡ ಸಂಭವಿಸಿದ್ದು, ಬಸ್​ನಲ್ಲಿದ್ದ 45 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನು ಓದಿ : ಗಾಂಜಾ ಮಿಕ್ಸ್ ಮಾಡಿ ಚಾಕೋಲೆಟ್ ಮಾರುತ್ತಿದ್ದ ಗ್ಯಾಂಗ್ ಲಾಕ್

ಬಸ್​ನಲ್ಲಿ ಸಾಗರದ ಶಾಲಾ ಕಾಲೇಜುಗಳಿಗೆ ತೆರಳುತ್ತಿದ್ದ ವಿರ್ಥಿಗಳೇ ಹೆಚ್ಚಾಗಿ ಇದ್ದರು. ಸುಮಾರು 35 ಜನ ವಿದ್ಯಾರ್ಥಿಗಳಿಗೆ ವಿದ್ಯುತ್ ಶಾಕ್ ಹೊಡೆದಿದೆ. ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದೆ. ಸದ್ಯ  ಗಾಯಾಳುಗಳಿಗೆ ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Exit mobile version