Site icon PowerTV

1 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಅಧಿಕಾರಿಗಳು

ಬೆಂಗಳೂರು : ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಬಿಬಿಎಂಪಿ ಕಂದಾಯ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬಿಬಿಎಂಪಿ ವಾರ್ಡ್ ನಂ.166 ರ ರೆವೆನ್ಯೂ ಇನ್ಸ್​ಪೆಕ್ಟರ್ ರಾಜಗೋಪಾಲ್ ಪರಾರಿಯಅಗಿದ್ದು, ಎಫ್​ಡಿಎ ರಾಘವೇಂದ್ರ, ಡಾಟಾ ಎಂಟ್ರಿ ಆಪರೇಟರ್​ ಸುರೇಶ್ ದತ್ತಾರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

1.25 ಲಕ್ಷ ಲಂಚಕ್ಕೆ ಬೇಡಿಕೆ

ಬನಶಂಕರಿ ಕರಿಸಂದ್ರ ಬಿಬಿಎಂಪಿ ಕಚೇರಿಯಲ್ಲಿ ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಲಾಕ್ ಆಗಿದ್ದಾರೆ. ಖಾತೆ ಬದಲಾವಣೆ ಮಾಡಿಕೊಡಲು ಮಾಚೋಹಳ್ಳಿಯ ಅರುಣ್ ಎಂಬುವವರಿಂದ 1.25 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು.

ಮಾಚೋಹಳ್ಳಿಯ ಅರುಣ್ ಈ ಬಗ್ಗೆ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಅಡ್ವಾನ್ಸ್​ ಆಗಿ 1 ಲಕ್ಷ ರೂಪಾಯಿ ಹಣ ಪಡೆಯುವಾಗ ಅಧಿಕಾರಿಗಳು ಸಿಕ್ಕಿ ಬಿದ್ದಿದ್ದಾರೆ. ಬಂಧಿತ ಇಬ್ಬರು ಆರೋಪಿಗಳ ಮೇಲೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Exit mobile version