Site icon PowerTV

ಚಿತ್ರದುರ್ಗ ಕಲುಷಿತ ನೀರು ಪ್ರಕರಣ : ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ

ಬೆಂಗಳೂರು : ಚಿತ್ರದುರ್ಗದ ಕಾವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಘಟನೆ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.‌

ಚಿತ್ರದುರ್ಗ ಜಿಲ್ಲಾಧಿಕಾರಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ, ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡು, ತಪ್ಪಿತಸ್ಥ ಅಧಿಕಾರಿಯನ್ನು ಕೂಡಲೇ ಅಮಾನತು ಮಾಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

3 ಸಾವು, 98 ಮಂದಿ ಅಸ್ವಸ್ಥ

ಮಂಗಳವಾರ ತಡರಾತ್ರಿ ಕಲುಷಿತ ನೀರು ಕುಡಿದು ಸುಮಾರು 98ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರಲ್ಲಿ ಮೂವರು ಸಾವನಪ್ಪಿದ್ದಾರೆ. ಕಾವಾಡಿಗರಹಟ್ಟಿಯ ಮಂಜುಳಾ, ರಘು, ವಡ್ಡರ ಸಿದ್ದವ್ವನಹಳ್ಳಿಯ ಪ್ರವೀಣ ಎಂಬುವವರು ಮೃತ ಪಟ್ಟಿದ್ದಾರೆ.

ಇನ್ನುಳಿದಂತೆ ಅಸ್ವಸ್ಥಗೊಂಡಿರುವ ಜನರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಮತ್ತು ನಗರದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ರಿಟಿಕಲ್ ಕಂಡಿಷನ್​ನಲ್ಲಿರುವ ಅಸ್ವಸ್ಥರನ್ನು ಬೆಂಗಳೂರು ಮತ್ತು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

Exit mobile version