Site icon PowerTV

ಜ್ಞಾನವಾಪಿ ವೈಜ್ಞಾನಿಕ ಸಮೀಕ್ಷೆಗೆ ಹೈಕೋರ್ಟ್ ಅನುಮತಿ

ಬೆಂಗಳೂರು : ಉತ್ತರ ಪ್ರದೇಶದ ವಾರಾಣಸಿಯಲ್ಲಿರುವ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್​ ಅನುಮತಿ ನೀಡಿದೆ.

ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಎಎಸ್‌ಐ ಸಮೀಕ್ಷೆಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ.

ಅಲಹಾಬಾದ್ ಹೈಕೋರ್ಟ್ ಜುಲೈ 27 ರಂದು ಎರಡೂ ಕಡೆಯ ವಿಚಾರಣೆಯ ನಂತರ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ತೀರ್ಪು ಹೊರಬಂದಿದ್ದು, ವೈಜ್ಞಾನಿಕ ಸಮೀಕ್ಷೆಗೆ ಕೋರ್ಟ್​ ಸಮ್ಮತಿ ನೀಡಿದೆ. ಹೈಕೋರ್ಟ್,​ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ.

ಸರ್ವೆ ನಡೆಸಲು ಪುರಾತತ್ವ ಇಲಾಖೆಗೆ ಅನುಮತಿ ನೀಡಿ ತೀರ್ಪು ನೀಡಿದೆ. ಸರ್ವೆಗೆ ತಡೆ ನೀಡುವಂತೆ ಕೋರಿದ್ದ ಮಸೀದಿ ಮಂಡಳಿ ಅರ್ಜಿ ವಜಾಗೊಳಿಸಿದೆ. ಹಲವು ಷರತ್ತು ವಿಧಿಸಿ ಸರ್ವೆ ನಡೆಸಲು ಅನುಮತಿ ನೀಡಲಾಗಿದೆ.

ಮೊದಲು ಸ್ಥಳದಲ್ಲಿ ಏನಿತ್ತು?

ಮಸೀದಿಗೂ ಮೊದಲು ಈ ಸ್ಥಳದಲ್ಲಿ ಏನಿತ್ತು? ಇದನ್ನು ಅರಿಯೋದಕ್ಕೆ ಸರ್ವೆಗೆ ವಾರಣಾಸಿ ನ್ಯಾಯಾಲಯ ಅನುಮತಿ ನೀಡಿದೆ. ಪುರಾತತ್ವ ಇಲಾಖೆಯಿಂದ ಜ್ಞಾನವಾಪಿ ಸಂಕೀರ್ಣದಲ್ಲಿ ಸರ್ವೆ ನಡೆಯಲಿದೆ. ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ಸಮೀಕ್ಷೆ ನಡೆಸಿ ಅಂತಿಮ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ.

Exit mobile version