Site icon PowerTV

ಪ್ರಧಾನಿ ಮೋದಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಸಿಎಂ ಆದ ಬಳಿಕ ಸಿದ್ದರಾಮಯ್ಯನವರ ಮೊದಲ ಭೇಟಿ ಇದಾಗಿದೆ.

ಈ ಹಿಂದೆ ಪ್ರಧಾನಿಗಳ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿದ್ದರು. ಆದರೆ, ಪ್ರಧಾನಿಗಳು ಪೂರ್ವ ನಿಯೋಜಿತ ಕಾರ್ಯಕ್ರಮದ ಹಿನ್ನೆಲೆ ವಿದೇಶ ಪ್ರವಾಸದಲ್ಲಿದ್ದರು. ಈ ಹಿನ್ನೆಲೆ ಪ್ರಧಾನಿಗಳ ಭೇಟಿ ಸಾಧ್ಯವಾಗಿರಲಿಲ್ಲ.

ಪ್ರಧಾನಿಗಳನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ, ರಾಜ್ಯಕ್ಕೆ ಅಕ್ಕಿ ಪೂರೈಕೆಯಲ್ಲಿ ಉಂಟಾಗುತ್ತಿರುವ ಸಮಸ್ಯೆ ಕುರಿತು ಚರ್ಚೆ ನಡೆಸಿದ್ದಾರೆ. ಇಂದು ಸಿದ್ದರಾಮಯ್ಯ ಹುಟ್ಟುಹಬ್ಬ ಹಿನ್ನೆಲೆ ಭೇಟಿಯ ವೇಳೆ ಪ್ರಧಾನಿಗಳು ಜನ್ಮ ದಿನದ ಶುಭಾಶಯ ತಿಳಿಸಿದ್ದಾರೆ. ಸದ್ಯ ಸಿಎಂ ಹಾಗೂ ಪಿಎಂ ಭೇಟಿಯ ಫೋಟೋಗಳು ವೈರಲ್ ಆಗುತ್ತಿವೆ.

ಇದೇ ವೇಳೆ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರದ ಸಹಕಾರ ಮತ್ತು ಕೇಂದ್ರ-ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಯೋಜನೆಗಳನ್ನು ಪ್ರಾರಂಭಿಸುವ ಕುರಿತು ಪ್ರಧಾನಿಗಳ ಜೊತೆಯಲ್ಲಿ ಚರ್ಚೆ ನಡೆಸಿದ್ದಾರೆ.

Exit mobile version