Site icon PowerTV

ಮೋದಿಗೆ ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ತಮ್ಮ ಹುಟ್ಟುಹಬ್ಬಕ್ಕೆ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧನ್ಯವಾದ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ತಮ್ಮ ಜನ್ಮದಿನಕ್ಕೆ ಶುಭ ಹಾರೈಸಿದ ಎಲ್ಲಾ ರಾಜಕೀಯ ನಾಯಕರಿಗೂ ಧನ್ಯವಾದ ಹೇಳಿದ್ದಾರೆ. ತಮ್ಮೆಲ್ಲರ ಅಕ್ಕರೆ, ಅಭಿಮಾನ, ಹಾರೈಕೆಗಳು ಸದಾ ನನ್ನ ಮೇಲಿರಲಿ ಎಂದು ಹೇಳಿದ್ದಾರೆ.

‘ನನ್ನ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ತಮಿಳುನಾಡಿನ ಮುಖ್ಯಮಂತ್ರಿಗಳಾದ ಎಂ.ಕೆ ಸ್ಟಾಲಿನ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಸೇರಿದಂತೆ ಎಲ್ಲ ಗೆಳೆಯರು ಮತ್ತು ಹಿತೈಷಿಗಳಿಗೆ ಹೃದಯಪೂರ್ವಕ ಧನ್ಯವಾದಗಳು’ ಎಂದು ಟ್ವೀಟ್ ಮಾಡಿದ್ದಾರೆ.

76ನೇ ವಸಂತಕ್ಕೆ ಕಾಲಿಟ್ಟ ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 76ನೇ ವಸಂತಕ್ಕೆ ಕಾಲಿಟ್ಟ ಸಿದ್ದರಾಮಯ್ಯ ಅವರಿಗೆ ಅನೇಕ ಗಣ್ಯರು ಶುಭಾಶಯಗಳನ್ನು ತಿಳಿಸಿದ್ದರು.

Exit mobile version