Site icon PowerTV

ಕಲುಷಿತ ನೀರು ಸೇವಿಸಿ ಅಸ್ವಸ್ಥ ಘಟನೆ: ಸ್ಥಳಕ್ಕೆ ಬಾರದ ಶಾಸಕ!

ಚಿತ್ರದುರ್ಗ : ಕಲುಷಿತ ನೀರು ಸೇವಿಸಿ ಇಲ್ಲಿನ ಕಾವಾಡಿಗರ ಹಟ್ಟಿಯ ಗ್ರಾಮದ 130 ಕ್ಕು ಹೆಚ್ಚು ಗ್ರಾಮಸ್ಥರು ಅಸ್ವಸ್ಥರಾಗಿದ್ದು 3 ಮೃತಪಟ್ಟಿದ್ದಾರೆ, ಇಷ್ಟೆಲ್ಲಾ ಅವಾಂತರಗಳು ನಡೆಯುತ್ತಿದ್ದರು ಘಟನಾ ಸ್ಥಳಕ್ಕೆ ಶಾಸಕರು ಬಂದು ವಿಚಾರಿಸಿಲ್ಲ ಎಂದು ಗ್ರಾಮಸ್ಥರು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ಗ್ರಾಮ ಪಂಚಾಯಿತಿ ಚುನಾವಣೆ: ಬಿಜೆಪಿ ಸದಸ್ಯೆಯ ಅಪಹರಣಕ್ಕೆ ಯತ್ನ

ಕಲುಷಿತ ನೀರು ಸೇವಿಸಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಈವರೆಗೂ ಪರಿಹಾರ ನೀಡಿಲ್ಲ ಎಂದು ಅಕ್ರೋಶ ವ್ಯಕ್ತಪಡಿಸಿದರು. ಅಂತ್ಯಕ್ರಿಯೆಗೂ ಮುನ್ನ ಜಿಲ್ಲಾಧಿಕಾರಿ ನೀಡಿದ ಭರವಸೆ ಈವರೆಗೆ ಈಡೇರಿಲ್ಲ ಎಂದು ಆರೋಪಿಸಿದರು.

ಕವಾಡಿಗರಹಟ್ಟಿಯಲ್ಲಿ 735 ಮನೆಗಳಿದ್ದು  ಹಟ್ಟಿಯಲ್ಲಿನ ನೀರು ಕುಡಿದ ಪರಿಣಾಮ ಗುರುವಾರ ಬೆಳಿಗ್ಗೆ ಹತ್ತು ಜನರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ಕವಾಡಿಗರಹಟ್ಟಿಯಲ್ಲಿ ತೆರೆದ ತಾತ್ಕಾಲಿಕ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದರಿಂದ ಇನ್ನಷ್ಟು ಆತಂಕಗೊಂಡ ಜನರು ನಗರಸಭೆ ಹಾಗೂ ಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆ ಆರಂಭಿಸಿದರು. ಶಾಸಕ ಕೆ.ಸಿ.ವೀರೇಂದ್ರ ಈವರೆಗೆ ಸ್ಥಳಕ್ಕೆ ಭೇಟಿ ನೀಡದೇ ಇರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಓವರ್ ಹೆಡ್ ಟ್ಯಾಂಕ್ ಮೂಲಕ ಆಗುತ್ತಿದ್ದ ನೀರು ಸರಬರಾಜು ಸ್ಥಗಿತಗೊಂಡಿದೆ. ಪರ್ಯಾಯವಾಗಿ ಟ್ಯಾಂಕರ್ ನೀರಿನ ವ್ಯವಸ್ಥೆ ಕಲ್ಪಿಸಲಾಗಿತ್ತು. ಟ್ಯಾಂಕರ್ ನೀರು ಗುರುವಾರ 11 ಗಂಟೆ ಕಳೆದರೂ ಬಾರದಿರುವುದು ಜನರ ಅಕ್ರೋಶಕ್ಕೆ ಎಡೆಮಾಡಿಕೊಟ್ಟಿತು. ತಹಶೀಲ್ದಾರ್ ನಾಗವೇಣಿ ಅವರಿಗೆ ಮುತ್ತಿಗೆ ಹಾಕಿ ಕಿಡಿಕಾರಿದರು.

Exit mobile version