Site icon PowerTV

ಸಿದ್ದರಾಮಯ್ಯಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಯಡಿಯೂರಪ್ಪ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು,‘ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜನ್ಮದಿನದ ಶುಭಾಶಯಗಳು’. ನಿಮ್ಮ ಮೇಲೆ ದೇವರ ಅನುಗ್ರಹ ಸದಾ ಇರಲಿ ಎಂದು ಹಾರೈಸುತ್ತೇನೆ ಎಂದು ಸಿಎಂಗೆ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ.

76ನೇ ವಸಂತಕ್ಕೆ ಕಾಲಿಟ್ಟ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 76ನೇ ವಸಂತಕ್ಕೆ ಕಾಲಿಟ್ಟ ಸಿದ್ದರಾಮಯ್ಯ ಅವರಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಶುಭಾಶಯಗಳನ್ನು ತಿಳಿಸಿದ್ದಾರೆ.

ಟ್ವಿಟರ್​​ನಲ್ಲಿ ಟ್ವೀಟ್ ಮಾಡಿರುವ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯ ತಿಳಿಸಿದ್ದಾರೆ. ದೇವರು ನಿಮಗೆ ಉತ್ತಮ ಆಯುರಾರೋಗ್ಯ ಕರುಣಿಸಲಿ ಎಂದು ಹಾರೈಸುತ್ತೇನೆ. ರಾಜ್ಯದ ಪ್ರಗತಿಗಾಗಿ, ಕನ್ನಡಿಗರ ಆಶೋತ್ತರಗಳನ್ನು ಈಡೇರಿಸಲು ಜೊತೆಯಾಗಿ ಸಾಗೋಣ ಎಂದು ಹೇಳಿದ್ದಾರೆ.

Exit mobile version