Site icon PowerTV

ಸ್ಕರ್ಟ್, ಮಿಡಿ, ಪ್ಯಾಂಟ್​ಗೆ ಕೊಕ್ : ದೇವೀರಮ್ಮನ ದೇಗುಲಕ್ಕೆ ಡ್ರೆಸ್ ಕೋಡ್ ಜಾರಿ

ಚಿಕ್ಕಮಗಳೂರು : ಜಿಲ್ಲೆಯ ಇತಿಹಾಸ ಪ್ರಸಿದ್ಧ ದೇವೀರಮ್ಮ ದೇಗುಲದಲ್ಲಿ ಡ್ರೆಸ್ ಕೋಡ್ ಆದೇಶ ಜಾರಿಗೊಳಿಸಲಾಗಿದೆ.

ದೇವೀರಮ್ಮನ ದೇಗುಲಕ್ಕೆ ಆಗಮಿಸುವ ಭಕ್ತರು ಸಾಂಪ್ರದಾಯಿಕ ಉಡುಗೆಯಲ್ಲಿ ಆಗಮಿಸಲು ಧಾರ್ಮಿಕದತ್ತಿ ಇಲಾಖೆ ಹಾಗೂ ದೇವಸ್ಥಾನ ಆಡಳಿತ ಮಂಡಳಿ ಸೂಚನೆ ನೀಡಿದೆ. ದೇವೀರಮ್ಮನ ದೇವಾಲಯಕ್ಕೆ ಬರುವ ಭಕ್ತರು ಸ್ಕರ್ಟ್, ಮಿಡಿ, ಸ್ಲೀವ್​​ ಲೆಸ್ ಡ್ರೆಸ್, ಪ್ಯಾಂಟ್, ಸಾಕ್ಸ್ ಹಾಕಿಕೊಂಡು ಬರುವಂತಿಲ್ಲ ಎಂದು ಸೂಚನಾ ಫಲಕ ಅಳವಡಿಸಲಾಗಿದೆ.

ದೇವಾಲಯದ ಆವರಣದೊಳಗೆ ಮೊಬೈಲ್ ಫೋನ್​​​ಗೆ ನಿಷೇಧ ಹೇರಲಾಗಿದ್ದು, ದೇವಾಯದ ಆವರಣದಲ್ಲಿ ಪ್ರೀ ವೆಡ್ಡಿಂಗ್ ಫೋಟೋ ಶೂಟ್​ಗೂ ನಿರ್ಬಂಧ ಹೇರಲಾಗಿದೆ. ದೇವಸ್ಥಾನಕ್ಕೆ ಯಾರೇ ಬಂದರೂ ಸಾಂಪ್ರದಾಯಿಕ ಉಡುಗೆಯಲ್ಲಿ ಬರಬೇಕೆಂದು ದೇವಾಲಯ ಆಡಳಿತ ಮಂಡಳಿ ಸೂಚಿಸಿದೆ.

Exit mobile version