Site icon PowerTV

ಇಮ್ರಾನ್ ಖಾನ್​ಗೆ 3 ವರ್ಷ ಜೈಲು ಶಿಕ್ಷೆ

ಬೆಂಗಳೂರು : ಪಾಕಿಸ್ತಾನ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಸಂಕಷ್ಟ ಎದುರಾಗಿದೆ. ತೋಷಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ದೋಷಿ ಅನ್ನೋದು ದೃಢವಾಗಿದ್ದು, 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

3 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಅಷ್ಟೇ ಅಲ್ಲ 5 ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸಲಾಗಿದೆ. ಇದರ ಜೊತೆಗೆ ಕೂಡಲೇ ಇಮ್ರಾನ್ ಖಾನ್‌ ಅವರನ್ನು ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಸೂಚನೆ ಕೊಡಲಾಗಿದೆ.

ಇಸ್ಲಾಮಾಬಾದ್ ಕೋರ್ಟ್ ಆದೇಶವನ್ನ ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೊರೆಹೋಗಿದ್ದ ಇಮ್ರಾನ್ ಖಾನ್‌ಗೆ ಭಾರಿ ಮುಖಭಂಗವಾಗಿದೆ. ಕ್ರಿಮಿನಲ್ ಮೊಕದ್ದಮೆ ವಿಚಾರಣೆ ತಡೆ ಕೋರಿ ಇಸ್ಲಮಾಬಾದ್ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ರು. ಆದ್ರೆ ಹೈಕೋರ್ಟ್‌ ಅರ್ಜಿಯನ್ನ ತಿರಸ್ಕರಿಸಿತ್ತು. ಇದನ್ನ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ್ದ ಇಮ್ರಾನ್‌ಗೆ ಬಿಗ್ ಶಾಕ್‌ ಎದುರಾಗಿದ್ದು, 3 ವರ್ಷ ಜೈಲು ಶಿಕ್ಷೆ ಖಾಯಂಗೊಳಿಸಲಾಗಿದೆ.

Exit mobile version