Site icon PowerTV

ಸಂಸದ ಬಿ.ವೈ ರಾಘವೇಂದ್ರ ಕಚೇರಿ ಮುಂದೆ ರೈತರ ಪ್ರತಿಭಟನೆ

ಶಿವಮೊಗ್ಗ : ತೆಂಗು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಹಾಗೂ ತೆಂಗಿನ ಬೆಲೆ ಇಳಿಕೆಯಿಂದ ಕಂಗಾಲಾಗಿರುವ ರೈತರ ಪರ ಸಂಸತ್ತಿನಲ್ಲಿ ಧ್ವನಿ ಎತ್ತುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದ್ದಾರೆ.

ಶಿವಮೊಗ್ಗ ತಾಲೂಕು ಕಚೇರಿ ಆವರಣದಲ್ಲಿರುವ ಸಂಸದ ಬಿ.ವೈ.ರಾಘವೇಂದ್ರ ಕಚೇರಿ ಮುಂಭಾಗ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದ್ದಾರೆ.

ಕೊಬ್ಬರಿ ಬೆಲೆ ತೀವ್ರವಾಗಿ ಕುಸಿತದಿಂದಾಗಿ ತೆಂಗು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ವಿಶ್ವದಾದ್ಯಂತ ಪ್ರಸಿದ್ಧವಾಗಿರುವ ಉಂಡೆ ಕೊಬ್ಬರಿ ಬೆಲೆ 7 ಸಾವಿರ ರೂಪಾಯಿಗೆ ಕುಸಿದಿದೆ. ರಾಜ್ಯದಲ್ಲಿ 2.18 ಲಕ್ಷ ಮೆಟ್ರಿಕ್‌ ಟನ್ ಉತ್ಪಾದನೆಯಾಗುವ ಕೊಬ್ಬರಿಯನ್ನು ನಂಬಿಕೊಂಡು ಸಾವಿರಾರು ಕುಟುಂಬಗಳು ಜೀವನ ನಡೆಸುತ್ತಿವೆ. ಅವರಿಗೆ ಬೆಲೆ ಕುಸಿತವು ತೀವ್ರ ಸಂಕಷ್ಟವನ್ನು ಉಂಟು ಮಾಡುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Exit mobile version