Site icon PowerTV

ನಾನೂ ಮೈಸೂರು-ಕೊಡಗು ಕ್ಷೇತ್ರದ ಆಕಾಂಕ್ಷಿ : ಹೆಚ್. ವಿಶ್ವನಾಥ್

ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ನಾನೂ ಆಕಾಂಕ್ಷಿ ಎಂದು ವಿಧಾನ ಪರಿಷತ್ತು ಸದಸ್ಯ ಹೆಚ್. ವಿಶ್ವನಾಥ್ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಟಿಕೆಟ್ ಕೇಳೋಣ ಅಂದುಕೊಂಡಿದ್ದೀನಿ, ಮುಂದಿನ ದಿನಗಳಲ್ಲಿ ಏನಾಗುತ್ತೆ ನೋಡೋಣ ಎಂದು ಲೋಕಸಭಾ ಚುನಾವಣೆ ಸ್ಪರ್ಧೆಯ ಇಂಗಿತ ವ್ಯಕ್ತಪಡಿಸಿದ್ದಾರೆ.

ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೆಸರು ಪ್ರಸ್ತಾಪ ಆಗಿದೆ. ಅದು ಒಳ್ಳೆಯದೆ. ಕಾಂಗ್ರೆಸ್ ಹೈಕಮಾಂಡ್ ಏನು ತೀರ್ಮಾನ ಮಾಡುತ್ತೋ ನೋಡೋಣ. ಡಿ.ಕೆ. ಶಿವಕುಮಾರ್ ನಾನು ಒಳ್ಳೆಯ ಸ್ನೇಹಿತರು. ಈಗ ಅವರು ರಾಜ್ಯದ ಡಿಸಿಎಂ ಆಗಿದ್ದಾರೆ. ಅವರನ್ನು ಭೇಟಿ ಮಾಡೋದು ತಪ್ಪಾ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್ ಸರ್ಕಾರದಲ್ಲಿ ಸ್ವಚ್ಛ ಆಡಳಿತ ಇದೆ : ರಾಮಲಿಂಗರೆಡ್ಡಿ

ಕುಮಾರಸ್ವಾಮಿಗೆ ತಿರುಗೇಟು

ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಪೆನ್​​ ಡ್ರೈವ್ ಹೇಳಿಕೆ ಬಗ್ಗೆ ಮಾತನಾಡಿ. ಕುಮಾರಸ್ವಾಮಿ ಅವರೇ ಆ ಪೆನ್​ಡ್ರೈವ್ ಏನಾಯ್ತು? ಸುಮ್ಮನೆ ಬಾಯಿಗೆ ಬಂದಂತೆ ಮಾತನಾಡಬೇಡಿ. ಏನೇನೋ ಆರೋಪ ಮಾಡುತ್ತೀರಿ? ಆದರೆ, ಯಾವುದನ್ನು ಸಾಬೀತು ಮಾಡಿದ್ದೀರಿ ಎಂದು ಚಾಟಿ ಬೀಸಿದ್ದಾರೆ.

Exit mobile version