Site icon PowerTV

ಇರೋದೆ ಇಬ್ರು ಸತ್ಯಹರಿಶ್ಚಂದ್ರರು, HDK-ಬೊಮ್ಮಾಯಿ : ಹೆಚ್. ವಿಶ್ವನಾಥ್

ಮೈಸೂರು : ಸತ್ಯಹರಿಶ್ಚಂದ್ರ ಸತ್ತ ಮೇಲೆ ರಾಜ್ಯದಲ್ಲಿ ಇಬ್ಬರೇ ಸತ್ಯಹರಿಶ್ಚಂದ್ರರು ಇರೋದು. ಒಬ್ಬರು ಹೆಚ್.ಡಿ.ಕುಮಾರಸ್ವಾಮಿ, ಇನ್ನೊಬ್ಬರು ಬಸವರಾಜ ಬೊಮ್ಮಾಯಿ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಹೆಚ್.ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಇಬ್ಬರೂ ಮುಖ್ಯಮಂತ್ರಿ ಆಗಿದ್ದವರು. ಆಗ ಮಾಡಿದ ಅದ್ವಾನಗಳನ್ನು ಜನ ಈಗಲೂ ಅನುಭವಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಹೆಚ್.ಡಿ ಕುಮಾರಸ್ವಾಮಿ ಅವರೇ ಆ ಪೆನ್​ಡ್ರೈವ್ ಏನಾಯ್ತು? ಸುಮ್ಮನೆ ಬಾಯಿಗೆ ಬಂದಂತೆ ಮಾತನಾಡಬೇಡಿ. ಏನೇನೋ ಆರೋಪ ಮಾಡುತ್ತೀರಿ? ಆದರೆ, ಯಾವುದನ್ನು ಸಾಬೀತು ಮಾಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ನೀವು ಮುಖ್ಯಮಂತ್ರಿ ಆಗಿದ್ದವರು. ನಿಮ್ಮ ಮಾತಿನಿಂದ ನಿಮ್ಮ ಘನತೆ ಕಡಿಮೆ ಆಗುತ್ತಿದೆ ಎಂದು ಕುಟುಕಿದ್ದಾರೆ.

Exit mobile version