Site icon PowerTV

IND vs WI : ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

ಬೆಂಗಳೂರು : ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಗಯಾನಾದ ಪೊವಿಡೆನ್ಸ್ ಸ್ಟೇಡಿಯಂನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟಿ-20 ಪಂದ್ಯ ನಡೆಯಲಿದೆ. ಮೊದಲ ಪಂದ್ಯದಲ್ಲಿ ಭಾರತವನ್ನು 4 ರನ್‌ಗಳಿಂದ ಸೋಲಿಸಿದ ವೆಸ್ಟ್ ಇಂಡೀಸ್ ತಂಡ ಆತ್ಮವಿಶ್ವಾಸದಿಂದ ಬೀಗುತ್ತಿದೆ.

ಇತ್ತ ಎರಡನೇ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಟೀಂ ಇಂಡಿಯಾ ವಿಂಡೀಸ್ ಪಡೆಗೆ ತಿರುಗೇಟು ನೀಡಲು ಸಜ್ಜಾಗಿದೆ. ಹೀಗಾಗಿ, ಎರಡನೇ ಪಂದ್ಯದಲ್ಲಿ ಯಾವ ತಂಡ ಮೇಲುಗೈ ಸಾಧಿಸಲಿದೆ ಎಂಬುದು ಕ್ರೀಡಾ ಪ್ರೇಮಿಗಳ ಕುತೂಹಲ ಹೆಚ್ಚಿಸಿದೆ.

ಭಾರತ ತಂಡ

ಶುಭ್​ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್

ವೆಸ್ಟ್ ಇಂಡೀಸ್

ಕೈಲ್ ಮೇಯರ್ಸ್, ಬ್ರಾಂಡನ್ ಕಿಂಗ್, ಜಾನ್ಸನ್ ಚಾರ್ಲ್ಸ್ (ವಿಕೆಟ್ ಕೀಪರ್), ನಿಕೋಲಸ್ ಪೂರನ್, ಶಿಮ್ರಾನ್ ಹೆಟ್ಮೆಯರ್, ರೋವ್‌ಮನ್ ಪೊವೆಲ್ (ನಾಯಕ), ಜೇಸನ್ ಹೋಲ್ಡರ್, ರೊಮಾರಿಯೋ ಶೆಫರ್ಡ್, ಅಕೇಲ್ ಹೋಸೇನ್, ಅಲ್ಝಾರಿ ಜೋಸೆಫ್, ಒಬೆಡ್ ಮೆಕಾಯ್

Exit mobile version