Site icon PowerTV

ತೆಲುಗು ಜಾನಪದ ಗಾಯಕ ‘ಗದ್ದರ್’ ಇನ್ನಿಲ್ಲ

ಬೆಂಗಳೂರು : ‘ಗದ್ದರ್’ ಎಂದೇ ಖ್ಯಾತರಾಗಿದ್ದ ತೆಲಂಗಾಣದ ಜಾನಪದ ಗಾಯಕ, ತೆಲುಗು ಕ್ರಾಂತಿಕವಿ ಗುಮ್ಮಡಿ ವಿಠ್ಠಲ್ ರಾವ್ ಇಂದು ಕೊನೆಯುಸಿರೆಳೆದಿದ್ದಾರೆ.

ಕಳೆದ ಕೆಲವು ದಿನಗಳಿಂದ ಗದ್ದರ್​​​ ತೀವ್ರ ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಇಂದು ಚಿಕಿತ್ಸೆ ಫಲಿಸದೆ ವಿಧಿವಶರಾಗಿದ್ದಾರೆ.

1948ರಲ್ಲಿ ಜನಿಸಿದ ಗುಮ್ಮಡಿ ವಿಠ್ಠಲ್ ರಾವ್, 2010ರವರೆಗೆ ನಕ್ಸಲೀಯ ಚಳವಳಿಯಲ್ಲಿ ಸಕ್ರಿಯರಾಗಿದ್ದರು. ನಂತರ ಅವರು ತೆಲಂಗಾಣ ಚಳವಳಿಗೆ ಸೇರ್ಪಡೆಗೊಂಡರು. ತೆಲಂಗಾಣದಲ್ಲಿ ಹಿಂದುಳಿದ ಜಾತಿಗಳು ಮತ್ತು ದಲಿತರ ಹಕ್ಕುಗಳಿಗಾಗಿ ಗದ್ದರ್ ಹೋರಾಟ ಮಾಡಿದ್ದರು. ತಮ್ಮ ಹಾಡುಗಳ ಮೂಲಕವೇ ಅಪಾರ ಅಭಿಮಾನಿಗಳನ್ನು ಪಡೆದು, ಹೆಚ್ಚಿನ ಜನಮನ್ನಣೆ ಗಳಿಸಿದ್ದರು.

ಸಿಎಂ ಸಿದ್ದರಾಮಯ್ಯ ಸಂತಾಪ

ಗುಮ್ಮಡಿ ವಿಠ್ಠಲ್ ರಾವ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.  ಈ ಕುರಿತು ಟ್ವೀಟ್ ಮಾಡಿರುವ ಸಿಎಂ, ಕ್ರಾಂತಿಕಾರಿ ಗಾಯಕ, ಚಳುವಳಿಯ ಸಂಗಾತಿ, ಜನಪರ ಹೋರಾಟದ ಗಟ್ಟಿದನಿ ಗದ್ದರ್ ಅವರಿಗೆ ಗೌರವಪೂರ್ವಕ ನಮನಗಳು ಎಂದು ಬರೆದುಕೊಂಡಿದ್ದಾರೆ.

Exit mobile version