Site icon PowerTV

ಕರಾಳ ದಿನ : ಎರಡು ಪ್ರತ್ಯೇಕ ಅಪಘಾತದಲ್ಲಿ ನಾಲ್ವರು ದುರ್ಮರಣ

ಬೆಂಗಳೂರು : ರಾಜ್ಯಕ್ಕೆ ಇಂದು ಕರಾಳ ಸೋಮವಾರ. ಎರಡು ಪ್ರತ್ಯೇಕ ಭೀಕರ ಅಪಘಾತದಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ.

ಕ್ಯಾಂಟರ್​​​ಗೆ ಬೊಲೆರೋ ಕಾರು ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲ ತಾಲೂಕಿನ ಟಿ. ಬೇಗೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಹೊಸಕೋಟೆಯ ಮುಳಬಾಗಿಲು ಗ್ರಾಮದವರಾದ ಕೇಶವ್ ರೆಡ್ಡಿ ಹಾಗೂ ಶ್ರೀನಿವಾಸ್ ಮೃತ ದುರ್ದೈವಿಗಳು.

ಕಾರಿನಲ್ಲಿದ್ದ ಇನ್ನೂ ಮೂರು ಜನರಿಗೆ ಗಂಭೀರ ಗಾಯವಾಗಿದೆ. ಹಿಂಬದಿಯಿಂದ ಕ್ಯಾಂಟರ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಮೂರು ಜನರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭೀಕರ ಅಪಘಾತ, ಇಬ್ಬರು ಸಾವು

ಪಾದಚಾರಿಗಳು ರಸ್ತೆ ದಾಟುವ ವೇಳೆ ಭೀಕರ ಅಪಘಾತವಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕು ತಿಮ್ಮಾಪುರ ಕ್ರಾಸ್ ಬಳಿ ನಡೆದಿದೆ. ಅಪಘಾತ ಸಂಭವಿಸಿದ ಕಾರು ಬೆಳಗಾವಿ ಮೂಲದು ಎನ್ನಲಾಗುತ್ತಿದ್ದು, ಪಾದಚಾರಿಗಳ ಮೇಲೆ ಕಾರು ಹರಿಸಿ ಕಾರ್ ಚಾಲಕ ಪರಾರಿಯಾಗಿದ್ದ. ಚಾಲಕನನ್ನ ಪೊಲೀಸರು ಅರ್ಧಗಂಟೆಯಲ್ಲಿ ಬಂಧಿಸಿದ್ದಾರೆ. ಶಿಗ್ಗಾಂವಿ ತಾಲೂಕು ನೀರಕಗಿ ಗ್ರಾಮದವರಾದ ಚಿದಾನಂದ ಶೆರೆವಾಡ ಮತ್ತು ವಿರೋಪಾಕ್ಷಪ್ಪ ಕಲೆ ಮೃತ ದುರ್ದೈಗಳು. ಈ ಸಂಬಂಧ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ದುರ್ಘಟನೆ ನಡೆದಿದೆ.

Exit mobile version