Site icon PowerTV

ಟಾರ್ಗೆಟ್ ಮಾಡಿದಷ್ಟು ನಾನು ಪ್ರಜ್ವಲಿಸುತ್ತೇನೆ : ಚಲುವರಾಯಸ್ವಾಮಿ

ಮಂಡ್ಯ : ನಮ್ಮನ್ನ ಹೆಚ್ಚೆಚ್ಚು ಟಾರ್ಗೆಟ್ ಮಾಡುವುದರಿಂದ ಮತ್ತಷ್ಟು ಪ್ರಕಾಶಮಾನವಾಗುತ್ತೇವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ.

ತಮ್ಮ ವಿರುದ್ದ ಅಧಿಕಾರಿಗಳ ದೂರು ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಲೆಟರ್ ಬಗ್ಗೆ ನನಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

ಜೆಡಿ ಬಳಿ ಕೇಳಿದಾಗ ಫೇಕ್ ಲೆಟರ್ ಎಂದಿದ್ದಾರೆ. ಬಹಳ ಜನ ಹುಡುಕಿ ಹುಡುಕಿ ಗೊಂದಲ ಸೃಷ್ಟಿ ಮಾಡಲು ಕಾಯುತ್ತಿದ್ದಾರೆ. ಒಂದು ವೇಳೆ ತಪ್ಪು ಎಸಗಿದ್ರೆ ಕಾರ್ಯದರ್ಶಿಗೆ ತನಿಖೆ ನಡೆಸಲು ಸೂಚಿಸುತ್ತೇನೆ. ಜಂಟಿ ನಿರ್ದೇಶಕರು ಫೇಕ್ ಲೆಟರ್, ನಮ್ಮಲ್ಲಿ ಯಾರು ಆ ತರಹದ ಅಧಿಕಾರಗಳಿಲ್ಲ ಎಂದಿದ್ದಾರೆ. ಆದರೂ ಈ ಬಗ್ಗೆ ಸತ್ಯಾಸತ್ಯತೆ ತಿಳಿದು ತನಿಖೆಗೆ ಸೂಚಿಸುತ್ತೇನೆ ಎಂದು ಹೇಳಿದ್ದಾರೆ.

ಟಾರ್ಗೆಟ್ ಮಾಡುವುದೇ ಕೆಲವರಿಗೆ ಕೆಲಸ

ನಮ್ಮನ್ನ ಹೆಚ್ಚೆಚ್ಚು ಟಾರ್ಗೆಟ್ ಮಾಡುವುದರಿಂದ ಮತ್ತಷ್ಟು ಪ್ರಕಾಶಮಾನವಾಗುತ್ತೇವೆ. ಮಂಡ್ಯ ಜಿಲ್ಲೆಯಲ್ಲಿ ಜಂಟಿ ನಿರ್ದೇಶಕರು ಯಾರ ಬಳಿ ಮಾತನಾಡುವುದಾಗಲಿ, ಭೇಟಿ ಮಾಡುವುದಾಗಲಿ ಮಾಡಿಲ್ಲ. ಬೆಳಗ್ಗೆ ಎದ್ದು ತಿಂಡಿ, ಊಟ ಮಾಡದೆ ನನ್ನ ಟಾರ್ಗೆಟ್ ಮಾಡುವುದೇ ಕೆಲವರಿಗೆ ಕೆಲಸವಾಗಿದೆ. ಅದಕ್ಕೆ ನನಗೆ ಬೇಜಾರಿಲ್ಲ, ನನ್ನ ಕೆಲಸ ನಾನು ಮಾಡ್ತೀನಿ ಎಂದು ತಿಳಿಸಿದ್ದಾರೆ.

Exit mobile version