Site icon PowerTV

ಟೈಮ್ ಬರಲಿ.. ಆಗ HDKಗೆ ಉತ್ತರ ಕೊಡ್ತೀನಿ : ಡಿ.ಕೆ ಶಿವಕುಮಾರ್

ಬೆಂಗಳೂರು : ನೈಸ್‌ ರಸ್ತೆ ಅಕ್ರಮದ ಕುರಿತು ಪ್ರಧಾನಿಗಳಿಗೆ ದೂರು ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರ ಆರೋಪಕ್ಕೆ ಸಮಯ ಬಂದಾಗ ನಾನು ಉತ್ತರ ನೀಡುತ್ತೇನೆ ಎಂದು ಚಾಟಿ ಬೀಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರು ಪ್ರಧಾನಮಂತ್ರಿವರೆಗೆ ಹೋಗಿದ್ದಾರೆ. ಹೀಗಾಗಿ, ಅವರ ಆರೋಪಗಳಿಗೆ ಮಾಧ್ಯಮಗಳ ಮುಂದೆ ಉತ್ತರ ನೀಡಿದರೆ ಸಾಲದು. ಅದಕ್ಕೆ ಸೂಕ್ತ ಸಮಯದಲ್ಲಿ ತಕ್ಕ ಉತ್ತರ ನೀಡುತ್ತೇನೆ ಎಂದು ತಿರುಗೇಟು ನೀಡಿದ್ದಾರೆ.

ನನಗೂ ಅವರ ಬಗ್ಗೆ ಗೊತ್ತಿದೆ. ಅವರ ವಿರುದ್ಧ, ಅವರ ತಂದೆ ವಿರುದ್ಧ ನಾನು ಸ್ಪರ್ಧಿಸಿದ್ದೇನೆ. ಅವರ ಪತ್ನಿ ವಿರುದ್ಧ ನನ್ನ ತಮ್ಮ ಸ್ಪರ್ಧಿಸಿದ್ದಾರೆ. ಕಾದು ನೋಡಿ, ಈಗ ನಾನು ಹೆಚ್ಚಾಗಿ ಚರ್ಚೆ ಮಾಡುವುದಿಲ್ಲ ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

Exit mobile version